ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಹುಬ್ಬಳ್ಳಿ: ಕುಟುಂಬಸ್ಥರು ಮದುವೆ ಮಾಡಲು ವಿಳಂಬ ಮಾಡಿದ್ದಕ್ಕೆ ಮನನೊಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ.
ಹುಬ್ಬಳ್ಳಿಯ ದೇವಾಂಗಪೇಟೆ ನಿವಾಸಿ ಶರಣಪ್ಪ ಫಕ್ಕೀರಪ್ಪ ಹಡಪದ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಈತನಿಗೆ ಮದುವೆ ನಿಶ್ಚಯವಾಗಿತ್ತು. ಮನೆಯವರೆಲ್ಲ ಲಾಕ್‌ಡೌನ್ ಮುಗಿದ ನಂತರ ಅದ್ಧೂರಿಯಾಗಿ ಮದುವೆ ಮಾಡಲು ನಿರ್ಧರಿಸಿದ್ದರು.
ಆದರೆ, ಲಾಕ್‌ಡೌನ್ ಮುಂದುವರೆಯುತ್ತಲೇ ಇರುವುದರಿಂದ ತನಗೆ ಬೇಗ ಮದುವೆ ಮಾಡಿ ಎಂದು ಕುಟುಂಬದ ಸದಸ್ಯರೊಂದಿಗೆ ಜಗಳ ಮಾಡಿಕೊಂಡಿದ್ದ. ಬಳಿಕ ಮನೆ ಬಿಟ್ಟು ಹೋಗಿದ್ದ ಶರಣಪ್ಪ ಸಂತೋಷ ನಗರದಲ್ಲಿನ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದಾದ ನಂತರ ಕೆರೆಯಲ್ಲಿ ಸಂತೋಷನ ಮೃತದೇಹ ಪತ್ತೆಯಾಗಿದ್ದು, ವಿಷಯ ತಿಳಿದು ಅಶೋಕ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment