ನರೇಗಾ ಯೋಜನೆಯಡಿ ೯ ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಗರದ ದೇಶಪಾಂಡೆ ನಗರದಲ್ಲಿರುವ ಪ್ರವಾಸಿ ಮಂದಿರದಲ್ಲಿ ನರೇಗಾ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು,ರಾಜ್ಯದಲ್ಲಿ ನರೇಗಾ ಯೋಜನೆಯಡಿ ಈವರೆಗೆ ಒಂಬತ್ತು ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದರು.
ಇನ್ನು ಲಾಕ್ ಡೌನ್ ಸಡಿಲಿಕೆಯಿಂದಾಗಿ ಹೊರರಾಜ್ಯಗಳಿಂದ ಆಗಮಿಸುವವರಿಂದ ಕರೋನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೇರೆ ಬೇರೆ ರಾಜ್ಯಗಳಿಂದ ತಮ್ಮ ರಾಜ್ಯಗಳಿಗೆ ಹಲವಾರು ಜನ ಆಗಮಿಸುವ ಅಪೇಕ್ಷೇ ಹೊಂದಿದ್ದಾರೆ.ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದೆ.ಸರ್ಕಾರ ಅಂತವರಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನೂ ಒದಗಿಸುವ ಮೂಲಕ ಕೊರೊನಾ ತಡೆಗಟ್ಟುವ ಕಾರ್ಯ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment