ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್-೧೯ ತಪಾಸಣೆ

ಹುಬ್ಬಳ್ಳಿ:ಕೊರೊನಾ ವೈರಸ್ ಭೀತಿ ಎಲ್ಲೆಡೆಯೂ ಹಬ್ಬುತ್ತಿದ್ದು,ಇದರ ಹಿನ್ನೆಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಧಾರವಾಡ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ಹು-ಧಾ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್-೧೯ ಪರೀಕ್ಷೆ ನಡೆಸಲಾಯಿತು.
ಗರ್ಭಿಣಿಯರಲ್ಲಿರುವ ಭಯವನ್ನು ನಿವಾರಣೆ ಮಾಡಲು ಹಾಗೂ ಕೊರೊನಾ ವೈರಸ್ ನಿಯಂತ್ರಣದ ಹಿನ್ನಲೆಯಲ್ಲಿ ಗರ್ಭಿಣಿ ಮಹಿಳೆಯರ ಗಂಟಲು ದ್ರವ ಹಾಗೂ ಮೂಗಿನ ದ್ರವದ ಪರೀಕ್ಷೆ ಮಾಡಲಾಯಿತು.
ಈಗಾಗಲೇ ಮೂರು ದಿನಗಳಿಂದ ಕೋವಿಡ್-೧೯ ಪರೀಕ್ಷೆ ಪ್ರಾರಂಭವಾಗಿದ್ದು,ದಿನಕ್ಕೆ ೬೦ ಜನರ ತಪಾಸಣೆ ಮಾಡಲಾಗುತಿದ್ದು,ಇಂದು ಮಧ್ಯಾಹ್ನದವರೆಗೆ ೩೫ ಜನ ಗರ್ಭಿಣಿಯರ ಗಂಟಲು ಹಾಗೂ ಮೂಗಿನ ದ್ರವವನ್ನು ಸಂಗ್ರಹಿಸಲಾಯಿತು.
ಇದೇ ವೇಳೆ ಮಾತನಾಡಿದ ಆರೋಗ್ಯಾಧಿಕಾರಿ ಡಾ.ಪ್ರಭು ಬಿರಾದಾರ,ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಹಾಗೂ ಕೊರೋನಾ ವೈರಸ್ ನಿಯಂತ್ರಣದ ಹಿನ್ನಲೆಯಲ್ಲಿ ಗರ್ಭಿಣಿಯರ ಗಂಟಲು ದ್ರವ ಹಾಗೂ ಮೂಗಿನ ದ್ರವವನ್ನು ಸಂಗ್ರಹಿಸಿ ಪರೀಕ್ಷೆ ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.
ಇನ್ನೂ ಗರ್ಭಿಣಿ ಮಹಿಳೆಯರು ಸ್ವಯಂಪ್ರೇರಿತವಾಗಿ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು ಅಲ್ಲದೇ ಯಾರಿಗಾದರೂ ರೋಗದ ಲಕ್ಷಣಗಳಿದ್ದರೇ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment