ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘ ಪ್ರತಿಭಟನೆ

ನಂಜನಗೂಡು(ಮೈಸೂರು): ಎಪಿಎಂಸಿ ಕಾಯ್ದೆ ಹಾಗೂ ಭೂಸುಧಾರಣೆ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ತಮ್ಮ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ನಂಜನಗೂಡಿನಲ್ಲಿ ಪ್ರತಿಭಟನೆ ನಡೆಸಲಾಯಿತು
ಪಟ್ಟಣದ ತಹಸಿಲ್ದಾರ್ ಕಚೇರಿ ಮುಂಭಾಗ ಜಮಾಯಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು
ಎಪಿಎಂಸಿ ಕಾಯ್ದೆ ಗೆ ತಿದ್ದುಪಡಿ ಮಾಡಬಾರದು,ರೈತರು ಕೃಷಿ ಕೂಲಿಕಾರರು ಕಸುಬುದಾರರು ಮತ್ತು ಸ್ತ್ರೀಶಕ್ತಿ ಗುಂಪುಗಳ ಸಾಲ ಮನ್ನಾ ಮಾಡಬೇಕು ಲಾಕ್ಡೌನ್ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಕನಿಷ್ಠ ೫ ಲಕ್ಷ ರೂ.ಪರಿಹಾರ ನೀಡಬೇಕು, ಜುಬಿಲಿಯಂಟ್ ಕಾರ್ಖಾನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂಬುದು ಸೇರಿದಂತೆ ತಮ್ಮ ಹತ್ತು ಹಲವು ಬೇಡಿಕೆಗಳ ಮನವಿ ಪತ್ರವನ್ನು ಶಿರಸ್ತೇದಾರ್ ಶಿವಪ್ರಕಾಶ್ ಮೂಲಕ ಉಭಯ ಸಂಘಟನೆಗಳ ಮುಖಂಡರು ಸಲ್ಲಿಸಿದರು.
ಇನ್ನು ಮನವಿ ಪತ್ರ ಸ್ವೀಕರಿಸಿ ಶಿರಸ್ತೇದಾರ್ ಶಿವಪ್ರಕಾಶ್ ಮಾತನಾಡಿ,ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಮನವಿಪತ್ರ ಸಲ್ಲಿಸಿದ್ದಾರೆ ಅದನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ತಲುಪಿಸಲಾಗುವುದು ಎಂದರು.
ಇದೇ ವೇಳೆ ಕಬ್ಬು ಬೆಳಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ,ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನ್ಯಾಯವಾಗುವ ಸಾಧ್ಯತೆ ಹೆಚ್ಚು ಸುಧಾರಣೆ ಕಾಯ್ದೆ ತಿದ್ದುಪಡಿ ಕ್ಷೇತ್ರಕ್ಕೆ ಮಾರಕವಾಗಿದೆ ಎಂದರು.
ಕೇAದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿ ರೈತರ ಕಣ್ಣಿಗೆ ಮಣ್ಣೆರಚುತ್ತಿವೆ ಎಂದು ವಾಗ್ದಾಳಿ ನಡೆಸಿ ಕೂಡಲೇ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್ಸು ಪಡೆಯಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಹಾಡ್ಯ ರವಿ ಕಾರ್ಯದರ್ಶಿ ಅಂಬಳೆ ಮಹದೇವಸ್ವಾಮಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ ಕಾರ್ಯದರ್ಶಿ ಹೆಜ್ಜಿಗೆ ಪ್ರಕಾಶ ಮಹದೇವಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹುಲ್ಲಹಳ್ಳಿ ಮೋಹನ್ ಎಕ್ಸ್ ಪ್ರೆಸ್ ಟಿವಿ ನಂಜನಗೂಡು(ಮೈಸೂರು)

Please follow and like us:

Related posts

Leave a Comment