ಬೆಳೆ ಹಾನಿ ಪರಿಹಾರಕ್ಕೆ ಮಾಜಿ ಸಚಿವರ ಒತ್ತಾಯ..

ಶಿರಾ(ತುಮಕೂರು): ಬಿರುಗಾಳಿ ಸಹಿತ ಸುರಿದ ಮಳೆಗೆ ಅಪಾರ ಬೆಳೆ ಹಾನಿಯಾಗಿದ್ದು,ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಆದ್ದರಿಂದ ಸರ್ಕಾರ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಮಾನದಂಡವನ್ನು ಬದಲಾಯಿಸಿ,ಅನ್ನದಾತರಿಗೆ ಅನುಕೂಲ ಆಗುವಂತೆ ಬೆಳೆ ಪರಿಹಾರದ ಮೊತ್ತವನ್ನು ನೀಡಬೇಕು ಎಂದು ಮಾಜಿ ಸಚಿವ ಟ.ಬಿ.ಜಯಚಂದ್ರ ಆಗ್ರಹಿಸಿದ್ದಾರೆ.
ಶಿರಾ ತಾಲೂಕಿನ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚೆಗೆ ಬಿರುಗಾಳಿ ಹಾಗೂ ಸುರಿದ ಮಳೆಗೆ ಅಡಿಕೆ, ತೆಂಗು,ದಾಳಿAಬೆ ಮತ್ತಿತರ ಬೆಳೆ ಹಾನಿಗೆ ಒಳಗಾಗಿ ಕೋಟ್ಯಂತರ ರೂ.ನಷ್ಟ ಸಂಭವಿಸಿದೆ. ಆದರೆ, ಪ್ರಕೃತಿ ವಿಕೋಪ ಪರಿಹಾರ ನಿಧಿ ಅಡಿಯಲ್ಲಿ ರೈತರಿಗೆ ನೀಡುವ ಪರಿಹಾರದ ಮೊತ್ತವು ಅತ್ಯಲ್ಪ ಪರಿಣಾಮದ್ದಾಗಿದೆ.ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಮಾನದಂಡವನ್ನು ಬದಲಾಯಿಸಿ, ರೈತರಿಗೆ ಅನುಕೂಲ ಆಗುವಂತೆ ಪರಿಹಾರದ ಮೊತ್ತ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಶಿರಾ(ತುಮಕೂರು)

Please follow and like us:

Related posts

Leave a Comment