ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆ

ದೇವದುರ್ಗ(ರಾಯಚೂರು):ಜೂನ್ ೭ ರಂದು ನಡೆಯಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆ ಜಾಲಹಳ್ಳಿ ಗ್ರಾಮದ ಉತ್ತಿನ ಎಲ್ಲಮ್ಮ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಸಭೆಯಲ್ಲಿ ಅರಕೇರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆದನಗೌಡ ಪಾಟೀಲ್ ಬುಂಕಲದೊಡ್ಡಿ, ಆರ್‌ಡಿಸಿಸಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ರಾಜಶೇಖರ ನಾಯಕ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಜಿ.ಅಬ್ದುಲ್ ಅಲೀಮ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇನ್ನು ಆರ್‌ಡಿಸಿಸಿ ಮಾಜಿ ಅಧ್ಯಕ್ಷ ರಾಜಶೇಖರ ನಾಯಕ ಮಾತನಾಡಿ, ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ನೂರಾರು ಕಾರ್ಯಕರ್ತರು ಸೇರಿ ರಾಷ್ಟ್ರ ಧ್ವಜ ಹಾಗೂ ಪಕ್ಷದ ಬಾವುಟ ಹಿಡಿದು ಪಕ್ಷದ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣವನ್ನು ಸಂಭ್ರಮಾಚರಣೆಯAತೆ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಸುರೇಶ ಭವಾನಿ ಎಕ್ಸ್ ಪ್ರೆಸ್ ಟಿವಿ ದೇವದುರ್ಗ(ರಾಯಚೂರು)

Please follow and like us:

Related posts

Leave a Comment