ದೊಡ್ಡ ಅಗ್ರಹಾರ `ಮದ್ಯ ಮಾರಾಟ ನಿಷೇಧಿತ ಗ್ರಾಮ’..

ಶಿರಾ(ತುಮಕೂರು):ಕೇವಲ ಅಧಿಕಾರಿಗಳಿಂದ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀನಿವಾಸ್ ತಿಳಿಸಿದ್ದಾರೆ.
ಶಿರಾ ತಾಲ್ಲೂಕಿನ ದೊಡ್ಡ ಅಗ್ರಹಾರ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿತ ಗ್ರಾಮ ಎಂಬ ನಾಮಫಲಕ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ದೊಡ್ಡ ಅಗ್ರಹಾರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಜೊತೆಗೆ ಶಿರಾ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ದೊಡ್ಡ ಅಗ್ರಹಾರ ಗ್ರಾಮವನ್ನು ಪಾನ ಮುಕ್ತ ಗ್ರಾಮವನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು.ಅದರಂತೆ ನಿನ್ನೆ ಮದ್ಯ ಮಾರಾಟ ನಿಷೇಧಿತ ಗ್ರಾಮ ಎಂದು ನಾಮಫಲಕ ಹಾಕಿಸಿದ್ದಾರೆ ಎಂದರು.
ಇನ್ನು ಕೇವಲ ಅಧಿಕಾರಿಗಳಿಂದ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ,ಬದಲಿಗೆ ಜನರ ಮನಪರಿವರ್ತನೆಯಿಂದ ಬದಲಾವಣೆ ಸಾಧ್ಯ ಎಂದು ತಿಳಿಸಿದರು.
ಈ ವೇಳೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಸಿಬ್ಬಂದಿಗಳು,ಊರಿನ ಹಿರಿಯರು,ದಲಿತ ಮುಖಂಡರು,ಜೈ ಭೀಮ್ ಗೆಳೆಯರ ಬಳಗ ಹಾಗೂ ಗ್ರಾಮಸ್ತರು ಹಾಜರಿದ್ದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಶಿರಾ(ತುಮಕೂರು)

Please follow and like us:

Related posts

Leave a Comment