ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಪೋಲಿಸರಿಂದ ಕಿರು ಚಿತ್ರ ಬಿಡುಗಡೆ..

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಜನಕ್ಕೆ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರು ಪೊಲೀಸರು ಕಿರು ಚಿತ್ರವೊಂದನ್ನ ಬಿಡುಗಡೆ ಮಾಡಿದ್ದಾರೆ. ಇನ್ನು ಈ ಚಿತ್ರಕ್ಕೆ ‘ಸಮಾಜ ಕಾಯುವ ಮುನ್ನ ನಾವು ಜಾಗೃತರಾದರೆ ಚೆನ್ನ’ ಎಂಬ ವಿಭಿನ್ನ ಶೀರ್ಷಿಕೆಯೊಂದಿಗೆ ಕಿರು ಚಿತ್ರ ತಯಾರಾಗಿದೆ. ಚಿತ್ರದಲ್ಲಿ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್, ಗ್ಲೌಸ್, ಸಾಮಾಜಿಕ ಅಂತರವನ್ನ ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸಲಾಗಿದೆ.ಅಲ್ಲದೇ ಪೊಲೀಸರು ಕರ್ತವ್ಯ ನಿರ್ವಹಿಸುವ ವೇಳೆ ಯಾವ ಯಾವ ಮುಂಜಾಗೃತ ಕ್ರಮಗಳನ್ನ ತೆಗೆದುಕೊಳ್ಳಬೇಕು ಎಂಬುದನ್ನ ಕೂಡ ತೋರಿಸಲಾಗಿದೆ.

Please follow and like us:

Related posts

Leave a Comment