ಸಕ್ಕರೆ ನಾಡು ಮಂಡ್ಯದಲ್ಲಿ ನಿಲ್ಲದ ಅನಾಹುತ

ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಒಂದಲ್ಲ ಒಂದು ಅನಾಹುತಗಳು ನಡೆಯುತ್ತಲೇ ಇವೆ.ಕೆಲದಿನಗಳ ಹಿಂದೆಯಷ್ಟೇ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲಾಗಿದ್ದರು. ಆ ಘಟನೆ ಮಾಸುವ ಮುನ್ನವೇ ಈಗಾ ಮತ್ತೊಂದು ಅವಘಡ ಸಂಭವಿಸಿದೆ,. ಕೆರೆಯಲ್ಲಿ ಹಸುಗಳಿಗೆ ನೀರು ಕುಡಿಸಲು ಹೋಗಿ 50 ವರ್ಷದ ರೈತ ದೇವರಾಜ್ ಎಂಬಾತ ಆಯಾತಪ್ಪಿ ಕೆರೆಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಕಬ್ಬಿನಕೆರೆ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆಯಿಂದ ವ್ಯಕ್ತಿಯ ಮೃತದೇಹಕ್ಕಾಗಿ ಶೋಧ ನಡೆಯುತ್ತಿದ್ದರು ವ್ಯಕ್ತಿಯ ಮೃತದೇಹ ಮಾತ್ರ ಪತ್ತೆಯಾಗಿರಲಿಲ್ಲ. ಇಂದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯ ತಂಡ ಹಾಗೂ ಈಜುಗಾರರು ಆಗಮಿಸಿದ್ದು ಮೃತದೇಹವನ್ನು ಪತ್ತೆಮಾಡಿದ್ದಾರೆ. ನಂತರ ತಾಲೂಕಿನ ಬಿಜಿ ನಗರದ ಏಮ್ಸ್ ಆಸ್ಪತ್ರೆಯ ಶವಗಾರಕ್ಕೆ ಮೃತದೇಹವನ್ನು ರವಾನೆ ಮಾಡಿದ್ದು ಮರಣೋತ್ತರ ಪರೀಕ್ಷೆಯ ನಂತರ ಅಂತ್ಯಕ್ರಿಯೆ ನಡೆಸಲು ಅನುವು ಮಾಡಿಕೊಡಲಾಗುವುದು ಎಂದು ಸ್ಥಳೀಯ ಪೋಲಿಸರು ತಿಳಿಸಿದ್ದಾರೆ.

Please follow and like us:

Related posts

Leave a Comment