ಖಾಯಂ ಹುದ್ದೆಗೆ ಪೌರಕಾರ್ಮಿಕರ ಕಸರತ್ತು..!

ಸಿಂಧನೂರು: ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಒತ್ತಾಯಿಸಿ ಕರ್ನಾಟಕ ಪ್ರಗತಿಪರ ಪೌರ ಕಾರ್ಮಿಕರ ಸಂಘದ ವತಿಯಿಂದ ನಗರದ ತಹಶಿಲ್ದಾರರ ಕಚೇರಿ ಮುಂದೆ ದಿನಗೂಲಿ ಹಾಗೂ ಹೊರಗುತ್ತಿಗೆ ಆಧಾರಿತ ಪೌರ ಕಾರ್ಮಿಕರು ಪ್ರತಿಭಟನೆ ಮಾಡಿದರು. ಈ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕಾರ್ಮಿಕ ಮುಖಂಡ ನಾಗರಾಜ್ ಪೂಜಾರ್ ನಗರ ಸಭೆಯಲ್ಲಿ ಕಳೆದ 13 ವರ್ಷಗಳಿಂದ ದಿನಗೂಲಿ ಹಾಗೂ ಹೊರಗುತ್ತಿಗೆ ಆಧಾರಿತ ಪೌರ ಕಾರ್ಮಿಕರು ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಇದುವರೆಗೂ ಇವರಿಗೆ ಯಾವುದೇ ರೀತಿಯ ಸೇವ ಭದ್ರತೆ ಇರುವುದಿಲ್ಲ. ನಗರ ಸಭೆಯಲ್ಲಿ ಸುಮಾರು 38 ಪೌರ ಕಾರ್ಮಿಕರ ಹುದ್ದೆಗಳು ಖಾಲಿ ಇದೆ. ಖಾಲಿ ಇದ್ದಂತಹ ಹುದ್ದೆಗಳಿಗೆ ಈ ಪೌರ ಕಾರ್ಮಿಕರನ್ನು ನೇಮಕ ಮಾಡಬೇಕು ಹಾಗೂ ಇತರೆ ಬೇಡಿಕೆ ಈಡೇರಿಸಲು ಒತ್ತಾಯಿಸಿ ಬರೆದ ಮನವಿ ಪತ್ರವನ್ನು ತಹಶಿಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು..

Please follow and like us:

Related posts

Leave a Comment