ಅಭಿವೃದ್ಧಿ ನಿಗಮದ ಅಧ್ಯಕ್ಷರ ಕಾರು ನುಚ್ಚುನೂರು

ಶಿರಾ: ಶಿರಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು,ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಿ.ಎಸ್.ಅರುಣ್ ಕಾರು ಅಪಘಾತಕ್ಕೀಡಾಗಿದೆ, ಅರುಣ್ ಅವರು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬೆಳ್ಳಂಬೆಳಗ್ಗೆ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಡ್ಡ ಬಂದ ಪರಿಣಾಮ, ಕಾರು ಚಾಲಕನ ನಿಯಂತ್ರಣ ತಪ್ಪಿಮುಂದೆ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅರುಣ್ ಅವರ ಜೊತೆ ಕಾರಿನಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ವಾಸುದೇವ್, ಎಪಿಎಂಸಿ ಶಂಕರಪ್ಪ ಇದ್ದು, ಅದೃಷ್ಟವಶಾ ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ.ತದನಂತರ ಅಪಘಾತವಾದ ಕಾರ್ ಅಲ್ಲಿಯೇ ಬಿಟ್ಟು ಬದಲಿ ಕಾರ್ ನಲ್ಲಿ ಅರುಣ್ ಪ್ರಯಾಣ ಬೆಳೆಸಿದ್ದಾರೆ. ಇನ್ನು ಸ್ಥಳಕ್ಕೆ ಸ್ಫಳೀಯ ಪೋಲಿಸರು ಆಗಾಮಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Please follow and like us:

Related posts

Leave a Comment