ಕಾರ್ಮಿಕ ಹಾಗೂ ರೈತ ಸಂಘಟನೆಗಳಿಂದ ಜಂಟಿಯಾಗಿ ಪ್ರತಿಭಟನೆ…

ಸಿಂಧನೂರು: ಸಿಂಧನೂರು ನಗರದ ತಹಶಿಲ್ ಕಚೇರಿ ಮುಂದೆ ಸೆಂಟರ್ ಆಫ್ ಇಂಡಿಯನ್ ಯೂನಿಯನ್, ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘಟನೆ ವತಿಯಿಂದ ಕೋವಿಡ್-19 ವೈರಾಣುವನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ. ಎಲ್ಲಾ ನಾಗರಿಕರಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆ ದೊರೆಯುವಂತೆ ಕ್ರಮ ವಹಿಸಬೇಕು ಎಂದು ಜಂಟಿಯಾಗಿ ಪ್ರತಿಭಟನೆಯನ್ನು ನಡೆಸಲಾಯಿತು. ಜೊತೆಗೆ ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲಾ ಕುಟುಂಬಗಳಿಗೆ ಕೋವಿಡ್-19 ಸಮಸ್ಯೆ ಇತ್ಯರ್ಥವಾಗುವವರೆಗೆ ಮಾಸಿಕ 7500ರೂಪಾಯಿ ನೆರವು ಘೋಷಿಸಬೇಕು, ಕುಟುಂಬದ ಸದಸ್ಯರಿಗೆ ತಿಂಗಳಿಗೆ ಒಬ್ಬೊಬ್ಬರಿಗೆ 10 ಕೆ.ಜಿ ಆಹಾರ ಸಾಮಗ್ರಿಗಳನ್ನು ಒದಗಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಕೇಳುವ ಎಲ್ಲಾ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 2೦೦ ದಿನಗಳ ಉದ್ಯೋಗ ನೀಡಬೇಕು. ನಿರುದ್ಯೋಗ ಯುವಕ ಯುವತಿಯರಿಗೆ ಮಾಸಿಕ 10000 ಸಾವಿರ ರೂಪಾಯಿ ನೀಡಬೇಕೆಂದು ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಿ ಬರೆದ ಮನವಿ ಪತ್ರವನ್ನು ತಹಶಿಲ್ದಾರರ ಮೂಲಕ ಪ್ರಧಾನಮಂತ್ರಿಗಳಿಗೆ ಸಲ್ಲಿಸಿದರು.

Please follow and like us:

Related posts

Leave a Comment