ಆಶಾ ಕಾರ್ಯಕರ್ತೆಯರ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ..!

ರಾಯಚೂರು: ಸಿರವಾರ ತಾಲ್ಲೂಕಿನಲ್ಲಿ ಆಶಾಕಾರ್ಯಕರ್ತರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಹಶಿಲ್ದಾರ್ ಕಚೇರಿಯವರೆಗೂ ರಸ್ತೆ ಜಾಥ ನಡೆಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದರು. ಕಳೆದ ಜೂನ್ ತಿಂಗಳಿಂದ ವಿವಿಧ ಹಂತದಲ್ಲಿ ಹೋರಾಟಗಳನ್ನು ನಡೆಸಿದ್ದು, ಜಿಲ್ಲಾಧಿಕಾರಿಗಳು ಹಾಗೂ ತಹಶಿಲ್ದಾರ ಮೂಲಕ ಮನವಿ ಪತ್ರಗಳನ್ನು ಮುಖ್ಯಮಂತ್ರಿಗಳಿಗೆ ಹಾಗೂ ಆರೋಗ್ಯ ಸಚಿವರಿಗೂ ಸಲ್ಲಿಸಿದ್ದೇವು. ಸರ್ಕಾರ ಆಶಾಕಾರ್ಯಕರ್ತರ ಸಮಸ್ಯೆಗಳಿಗೆ ಸೂಕ್ತ ಭರವಸೆ ನೀಡುವುದಾಗಿ ಭರವಸೆ ನೀಡಿದ್ದು,, ಇದುವರೆಗೂ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ . ಕೋವಿಡ್ -19 ಬಂದನಂತರ ನಾಲ್ಕು ತಿಂಗಳಿಂದ ಎಡೆಬಿಡದೆ ಕೊರೊನಾ ರೋಗಿಗಳನ್ನು ಪತ್ತೆಹಚ್ಚುವಲ್ಲಿ ಆಶಾಕಾರ್ಯಕರ್ತೆಯರ ಪಾತ್ರ ಮುಖ್ಯವಾದದ್ದು, ನಮ್ಮ ಶ್ರಮಕ್ಕೆ ತಕ್ಕಂತೆ ವೇತನವಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರ ಗೌರವಧನ ಹಾಗೂ ಪ್ರೋತ್ಸಾಹಧನ ಎರಡು ಸೇರಿಸಿ ಪ್ರತಿ ತಿಂಗಳಿಗೆ 12000 ಸಾವಿರ ವೇತನ ನೀಡಬೇಕು,ಜೊತೆಗೆ ಕೊರೋನಾ ನಿಯಂತ್ರಣಕ್ಕೆ ಆಶಾ ಕಾರ್ಯಕರ್ತರು ತಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಸುರಕ್ಷತಾ ಸಾಮಗ್ರಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ನೀಡಬೇಕೆಂದು ತಾಲೂಕಿನ ಆಶಾ ಕಾರ್ಯಕರ್ತರು ಕನ್ನಡಪರ ದಲಿತ ಸಂಘಟನೆಗಳ ಮೂಲಕ ಆರೋಗ್ಯ ಅಧಿಕಾರಿಗಳಿಗೆ ಹಾಗೂ ತಹಶಿಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

Please follow and like us:

Related posts

Leave a Comment