ವಿಶ್ವ ಜನಸಂಖ್ಯಾ ದಿನಾಚರಣೆ ಜಾಥ..!

ಮಂಡ್ಯ: ತಾಲ್ಲೂಕು ಆಡಳಿತ ,ತಾಲ್ಲೂಕು ಅರೋಗ್ಯಾಧಿಕಾರಿಗಳ ಕಚೇರಿ, ತಾಲ್ಲೂಕು ಪಂಚಾಯಿತಿ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಅರೋಗ್ಯ ಇಲಾಖೆಯ ಸಿಬ್ಬಂದಿಗಳಿಂದ ಜಾಥವನ್ನು ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು. ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ಜಾಥಗೆ ತಹಸೀಲ್ದಾರ್ ಚಂದ್ರಮೌಳಿ ರವರು ಹಸಿರು ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿದರು ಬಳಿಕ ಮಾತನಾಡಿ, ಜನಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸಮಸ್ಯೆಗಳು ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಜನಸಂಖ್ಯೆ ಹೆಚ್ಚಾದಂತೆ ಆರ್ಥಿಕ ಸಮಸ್ಯೆ, ನಿರುದ್ಯೋಗ ಸಮಸ್ಯೆ ಎಲ್ಲಾ ರೀತಿ ಸಮಸ್ಯೆ ಹೆಚ್ಚಾಗುತ್ತದೆ. ಜನಸಂಖ್ಯೆ ನಿಯಂತ್ರಣವಾಗದಿದ್ದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತದೆ. ಪ್ರತಿಯೊಬ್ಬ ಪ್ರಜೆಯಲ್ಲೂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಬೇಕು. ಇದರಿಂದ ದೇಶ ಅಭಿವೃದ್ಧಿ ಆಗುತ್ತದೆ ಎಂದು ಮಾಧ್ಯಮದ ಮುಖಾಂತರ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ಸ್ ಟಿವಿ

Please follow and like us:

Related posts

Leave a Comment