ಒಂದು ವರ್ಷ ಪೂರೈಸಿದ ಯಡಿಯೂರಪ್ಪ ಸರ್ಕಾರ..!

ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ಪಾಟೀಲ್ ಬಿ.ಎಸ್.ಯಡಿಯೂರಪ್ಪ ಅವರೇ ಮುಂದಿನ ದಿನಗಳಲ್ಲಿಯೂ ಕೂಡ ಮುಖ್ಯ ಮಂತ್ರಿಯಾಗಿ ಮುಂದುವರೆಯಲಿದ್ದು,ಅವರ ನಾಯಕತ್ವದಲ್ಲಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸುಭದ್ರವಾಗಿದೆ, ಯಡಿಯೂರಪ್ಪ ಅಧಿಕಾರ ವಹಿಸಿಕೊಂಡಾಗ ಬರ ತಾಂಡವವಾಡುತ್ತಿತ್ತು, ಅಧಿಕಾರ ವಹಿಸಿಕೊಂಡ ಕೆಲ ದಿನದಲ್ಲೇ ಅತಿವೃಷ್ಠಿ ಉಂಟಾಯಿತು, ಸಿಎಂ ಒಬ್ಬರೇ ಮುಂದೆ ನಿಂತು ನೆರೆ ಹಾವಳಿ ಸಮಸ್ಯೆಯನ್ನು ಎದುರಿಸಿದರು ಕೋವಿಡ್19 ಸಂದರ್ಭದಲ್ಲೂ ಸಿಎಂ ಸಮಪರ್ಕವಾಗಿ ಕೆಲಸ ಮಾಡಿದ್ದಾರೆ, ಸಿಎಂ ಮುಳ್ಳಿನ ಹಾಸಿಗೆಯನ್ನು ಸೂಕ್ಷ್ಮವಾಗಿ ನಿರ್ವಹಣೆ ಮಾಡಿದ್ರು, ಸಿಎಂ ಸಮರ್ಥ ನಾಯಕತ್ವದಿಂದ ಕೆಲಸ ಮಾಡ್ತಿದ್ದಾರೆ. ಪೂರ್ಣ ಅವಧಿಯನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮುಗಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Please follow and like us:

Related posts

Leave a Comment