ಸೀಲ್ ಡೌನ್ ಆಗಿದ್ದ ಗೊರವನಹಳ್ಳಿ ದೇವಾಸ್ಥಾನ ತೆರವು..

ತುಮಕೂರು : ಅರ್ಚಕರ ಪತ್ನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಗೊರವನಹಳ್ಳಿ ಲಕ್ಷ್ಮಿ ದೇವಾಲಯ ಸೀಲ್ಡೌನ್ ಮಾಡಲಾಗಿತ್ತು. ಆದರೆ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಭಕ್ತರಿಗಾಗಿ ಸೀಲ್ಡೌನ್ ತೆರವು ಮಾಡಿ ದೇವಾಲಯ ತೆರೆಯಲಾಗಿದೆ. ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡ ದೇವಾಲಯದ ಆಡಳಿತ ಸಿಬ್ಬಂದಿ ಇಂದಿನಿಂದ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇತ್ತೀಚೆಗೆ ಅರ್ಚಕರ ಪತ್ನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸೀಲ್ಡೌನ್ ಮಾಡಲಾಗಿ, ಅರ್ಚಕರು ಹಾಗು ಮಕ್ಕಳಿಗೆ ಕೊರೊನಾ ಟೆಸ್ಟ್ ನಡೆಸಲಾಗಿತ್ತು. ಆದರೆ ವರದಿಯಲ್ಲಿ ನೆಗೆಟಿವ್ ಬಂದ ಹಿನ್ನೆಲೆ ದೇವಸ್ಥಾನ ತೆರೆಯಲು ಅವಕಾಶ ನೀಡಲಾಗಿದೆ.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment