ಟಿಪ್ಪು ಸುಲ್ತಾನ್ ಇತಿಹಾಸವನ್ನು ಪುಸ್ತಕದಿಂದ ಅಳಿಸಿದ ಸರ್ಕಾರ..!

ಸಿಂಧನೂರು : ಟಿಪ್ಪು ಸುಲ್ತಾನ್ ಇತಿಹಾಸವನ್ನು ಪುಸ್ತಕದಿಂದ ಅಳಿಸಿ, ಸರ್ಕಾರ ಬಿಜೆಪಿ ಯುವ ಜನತೆಯ ಹಾದಿ ತಪ್ಪಿಸುತ್ತಿರುವುದು ಖಂಡನೀಯ ಎಂದು ಬಸನಗೌಡ ಬಾದರ್ಲಿ ಗುಡುಗಿದ್ದಾರೆ. ಬಿಜೆಪಿ ಹಾಗೂ ಆರ್ಎಸ್ಎಸ್ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಜನರಿಗೆ ತಿಳಿಸುತ್ತಿಲ್ಲ. ದೇಶಪ್ರೇಮಿ ಟಿಪ್ಪು ಸುಲ್ತಾನ್ ಬಗ್ಗೆ ಇರುವ ಇತಿಹಾಸವನ್ನು ಪಠ್ಯದಿಂದ ಅಳಿಸಿ ಹಾಕುವ ನಿರ್ಧಾರಕ್ಕೆ ರಾಜ್ಯ ಬಿಜೆಪಿ ಸರ್ಕಾರ ಹೊರಟಿರುವುದು ಖಂಡನೀಯವಾಗಿದೆ. ಸ್ವಾತಂತ್ರಕ್ಕಾಗಿ ಟಿಪ್ಪು ಸುಲ್ತಾನ್ ಅವರು ಪಟ್ಟ ಕಷ್ಟದ ಹೋರಾಟವನ್ನು ನಾಶಪಡಿಸುತ್ತಿರುವುದು ದುರ್ದೈವ ಸಂಗತಿಯಾಗಿದೆ. ಕೊರೊನಾ ಸಮಯದಲ್ಲಿ ಬಿಜೆಪಿ ಸರ್ಕಾರ ಪರಿಸ್ಥಿತಿಯ ದುರ್ಲಾಭ ಪಡೆದು ಇಂತಹ ಕೆಲಸ ಮಾಡಿರುವುದು ಸರಿಯಲ್ಲ. ಟಿಪ್ಪು ಓರ್ವ ದೇಶಭಕ್ತ. ಅವರಿಗೆ ಗೌರವ ನೀಡುವುದು ಯುವಜನತೆಯ ಕರ್ತವ್ಯ. ಬಿಜೆಪಿ ಪಠ್ಯಪುಸ್ತಕದಿಂದ ಟಿಪ್ಪು ವಿಚಾರ ಮಾತ್ರವಲ್ಲ ಸಂವಿಧಾನ, ಜಾತ್ಯತೀತತೆ, ಪ್ರಜಾಪ್ರಭುತ್ವ ಮುಂತಾದ ವಿಷಯಗಳನ್ನು ಒಳಗೊಂಡ ಪಠ್ಯವನ್ನು ಕಡಿತ ಮಾಡುತ್ತಿದೆ. ಸಂವಿಧಾನ ರಚನೆಯಲ್ಲಿ ಪಾಲುದಾರರಲ್ಲದ ಬಿಜೆಪಿ ನಾಯಕರು ಇತಿಹಾಸವನ್ನು ಕೇಸರೀಕರಣ ಮಾಡುತ್ತಿದ್ದಾರೆ. ಕೂಡಲೇ ರಾಜ್ಯ ಬಿಜೆಪಿ ಸರ್ಕಾರ ಈ ನಿರ್ಧಾರವನ್ನು ಕೈ ಬಿಟ್ಟು ಕೋವಿಡ್ ಸಂಕಷ್ಟ ಪರಿಹರಿಸುವಲ್ಲಿ ಹೆಚ್ಚಿನ ಗಮನ ನೀಡಬೇಕು. ಇಲ್ಲವಾದರೆ ಯುವ ಕಾಂಗ್ರೆಸ್ನಿOದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ವರದಿ : ಸೈಯದ್ ಬಂದೇನವಾಜ್

Please follow and like us:

Related posts

Leave a Comment