ರಾಯಚೂರು

ನಗರೋತ್ಥಾನದ ಕಾಮಗಾರಿ ಆರಂಭ..ಸಾರ್ವಜನಿಕರಿಂದ ದಂಡಾಧಿಕಾರಿಗಳಿಗೆ ದೂರಿನ ಸುರಿಮಳೆ..!

Published

on

ರಾಯಚೂರು: ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ್ ಪಟ್ಟಣದಲ್ಲಿ 3 ನೇ ಹಂತದ ನಗರೋತ್ಥಾನದ ಕಾಮಗಾರಿ ಪ್ರಾರಂಭವಾಗಿ ಒಂದು ವಾರ ಕಳೆದುಹೋಗಿದೆ. ಸಾರ್ವಜನಿಕರ ದೂರವಾಣಿ ದೂರಿನ ಅನ್ವಯ ಸ್ಥಳಕ್ಕೆ ಧಾವಿಸಿದ ತಾಲ್ಲೂಕು ದಂಡಾಧಿಕಾರಿಗಳು ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ್ದಾರೆ. ಮಳೆಗಾಲದಲ್ಲಿ ಕಾಮಗಾರಿ ಪ್ರಾರಂಭ ಮಾಡಿರುವುದರಿಂದ, ವಾಸ ಮಾಡಲು ಮನೆ ಇಲ್ಲದಂತಾಗಿದೆ. ಇನ್ನು ವಿದ್ಯುತ್ ಸಂಪರ್ಕವೂ ಇಲ್ಲದೆ ಕತ್ತಲಲ್ಲಿ ಜೀವನ ಮಾಡುವ ದುಸ್ಥಿತಿ ಎದುರಾಗಿದೆ. ಎಂದು ಸಾರ್ವಜನಿಕರು ತಮ್ಮ ಅಳಲನ್ನು ಅವರ ಮುಂದೆ ಹೇಳಿ ಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ದಂಡಾಧಿಕಾರಿಯಾದ ಶ್ರುತಿಯವರು ಸಾರ್ವಜನಿಕರ ಒತ್ತಾಯದ ಮೇರೆಗೆ ಸಾರ್ವಜನಿಕರ ಹಿತ ದೃಷ್ಟಿಯಿಂದ ಕಾಮಗಾರಿಯು ನಡೆಯುತ್ತಿದೆ. ಆದಷ್ಟೂ ಬೇಗ ತ್ವರಿತವಾಗಿ ಕಾಮಗಾರಿಯನ್ನು ಮುಗಿಸಿ ಕೊಡುವುದಾಗಿ ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.

ವರದಿ- ಸುಲ್ತಾನ್ ಬಾಬು ಎಕ್ಸ್ ಪ್ರೆಸ್ ಟಿವಿ ಸಿರವಾರ

Click to comment

Trending

Exit mobile version