ಕಲಬುರಗಿ

ಸರ್ಕಾರದ ನಿಯಮ ಗಾಳಿಗೆ ತೂರಿ ಬಕ್ರೀದ್ ಹಬ್ಬ ಆಚರಣೆ..!

Published

on

ಕಲಬುರಗಿ: ಇಂದು ದೇಶಾದ್ಯಂತ ಬಕ್ರೀದ್ ಹಬ್ಬದ ಹಿನ್ನೆಲೆ ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಹಬ್ಬವನ್ನು ಆಚರಣೆ ಮಾಡಲು ಮುಂದಾಗಿದ್ದಾರೆ. ಈ ಸಮಯದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ. ಆದರೆ ಈ ಮಸೀದಿಯಲ್ಲಿ ಪ್ರಾರ್ಥನಾ ಸಮಯದಲ್ಲಿ ಯಾವುದೇ ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಎಂತೂ ಮೊದಲೇ ಇಲ್ಲ. ಕಲಬುರುಗಿಯ ಸೂಪರ್ ಮಾರ್ಕೆಟ್ ನಲ್ಲಿರುವ ದರ್ಗಾದಲ್ಲಿ ನೂರಾರು ಮಂದಿ ಪ್ರಾರ್ಥನೆಗೆಂದು ಆಗಮಿಸಿದ್ದಾರೆ, ಪ್ರಾರ್ಥನೆಯ ಸಮಯದಲ್ಲಿ ಯಾರು ಕೂಡ ಸರ್ಕಾರದ ನಿಯಮವನ್ನು ಗಮನದಲ್ಲಿಟ್ಟುಕೊಳ್ಳದೇ ನಿಯಮವನ್ನು ಗಾಳಿಗೆ ತೂರಿ ನಿಯಮ ಉಲ್ಲಂಘನೆ ಮಾಡಿದ್ದಾರೆ.ಯಾರೊಬ್ಬರು ಮಾಸ್ಕ್ ಧರಿಸದೇ , ಸಾಮಾಜಿಕ ಅಂತರ ಕಾಪಾಡದೇ ಸಾಮೂಹಿಕವಾಗಿ ಪ್ರಾರ್ಥನೆ ಮಾಡುತ್ತಿದ್ದು ಅದರ ವಿಡಿಯೋ ಎಲ್ಲೇಡೆ ಹರಿದಾಡ್ತಾಯಿದೆ. ಆದ್ರೆ ಕೆಲ ಮುಸ್ಲಿಂ ಬಾಂಧವರು ಮಾತ್ರ ಕೊರೊನಾದ ಹಿನ್ನೆಲೆ ಹಬ್ಬವನ್ನು ಸರಳವಾಗಿ ಆಚರಣೆ ಮಾಡುತ್ತಿದ್ದು ಕೊರೊನಾ ಹರಡದಂತೆ ಎಚ್ಚರವಹಿಸುತ್ತಿದ್ದಾರೆ.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version