ಮಳವಳ್ಳಿ: ಕಳೆದ ವಾರದ ಹಿಂದೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಕಲ್ಮನೆ ಕಾಮೇಗೌಡರ ಬಲಗಾಲು ಗಾಯವಾಗಿದ್ದ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಸಂದರ್ಭದಲ್ಲಿ ಕೋರೋನಾ ಸೋಂಕು ಕಾಣಿಸಿಕೊಂಡಿದ್ದು, ಮಂಡ್ಯ ಮಿಮ್ಸ್ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಇದೀಗ ವರದಿಯಲ್ಲಿ ನೆಗಟಿವ್ ಬಂದಿದ್ದು , ಇಂದು ಅಥವಾ ನಾಳೆ ಡಿಸ್ಚಾರ್ಜ್ ಮಾಡಲಿದ್ದು ಮನೆಯಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿದೆ. ಇನ್ನೂ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರಿಗೆ ಆಧುನಿಕ ಭಗೀರಥ ಕಲ್ಮನೆ ಕಾಮೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ತನ್ನ ಚಿಕಿತ್ಸೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಸುಧಾಕರ್ ನಿಗಾ ವಹಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ವರದಿ : ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ