ಮಳೆಯಿಂದಾ ಬಕ್ರೀದ್ ಹಬ್ಬಕ್ಕೆ ಕೊಂಚ ಮಟ್ಟಿಗೆ ಅಡ್ಡಿ..!

ಶಿರಾ:- ಕಳೆದ ಕೆಲ ದಿನಗಳಿಂದ ತಾಲೂಕಿನದ್ಯಂತ ಉತ್ತಮ ಮಳೆಯಾಗುತ್ತಿದ್ದು, ಈ ಮಳೆಯಿಂದಾಗಿ ಕೆಲ ಕಡೆ ರೈತರಿಗೆ ವರದಾನವಾಗಿದೆ. ಮಳೆಯಿಂದಾಗಿ ಕೃಷಿ ಚಟುವಟಿಕೆ ಗರಿಗೆದರಿದ್ದು, ಕೆಲವು ಕಡೆ ಬೆಳೆ ಕಟಾವಿಗೆ ಬಂದಿರುವುದರಿಂದ ಕಟಾವು ಮತ್ತು ಒಕ್ಕಣೆಗೆ ಮಳೆಯಿಂದಾಗಿ ತೊಂದರೆಯಾಗಿದೆ. ಇಂದು ಎಲ್ಲೇಡೆ ಬಕ್ರೀದ್ ಹಬ್ಬದ ಸಂಭ್ರಮ ಒಂದು ಕಡೆಯಾದ್ರೆ ಮತ್ತೊಂದು ಕಡೆ ಈ ಮಳೆಯಿಂದಾಗಿ ಹಬ್ಬ ಆಚರಿಸುವವರಿಗೆ ಕೊಂಚ ನಿರಾಸೆಯಾಗಿದೆ. ಸಂಜೆ 4 ಗಂಟೆಗೆ ಶುರುವಾದ ಮಳೆಯಿಂದಾಗಿ ರಸ್ತೆ ತುಂಬೆಲ್ಲಾ ನೀರು ತುಂಬಿದ್ದು,ವಾಹನಗಳ ಸಂಚಾರ ಅಸ್ತವ್ಯಸ್ತವಾಗಿದೆ. ನಗರ ಸೇರಿದಂತೆ ವಿವಿಧ ಭಾಗದ ಗ್ರಾಮಗಳಲ್ಲಿ ಧಾರಾಕಾರ ಮಳೆಯಾದರೆ ಕೆಲವಡೆ ಸಾಧಾರಣ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸವನ್ನು ತಂದಿದೆ.

ವರದಿ: ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ

Please follow and like us:

Related posts

Leave a Comment