ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಡ..ಆಸ್ಪತ್ರೆಗೆ ದಾಖಲು..!

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಅಬ್ಬರಿಸುತ್ತಿದ್ದು, ಇದೀಗ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಇರುವುದು ಧೃಡವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟನೆ ನೀಡಿರುವ ಯಡಿಯೂರಪ್ಪ, ರೋಗ ಲಕ್ಷಣಗಳು ಇಲ್ಲದಿದ್ದರು, ಕೊರೊನಾ ಪಾಸಿಟಿವ್ ಬಂದಿದೆ.ಹೀಗಾಗಿ ಮುನ್ನೆಚ್ಚರಿಕೆ ಹಾಗು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಕೂಡಲೇ ಕೋವಿಡ್ ಟೆಸ್ಟ್ ಮಾಡಿಸುವಂತೆ ಸಿಎಂ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇನ್ನು ಸಿಎಂ ಬಿ.ಎಸ್ ಯಡಿಯೂರಪ್ಪರಿಗೆ ಸೋಂಕು ಇರುವುದು ಧೃಡವಾಗುತ್ತಿದ್ದಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment