ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಯಡಿಯೂರಪ್ಪನವರೇ ಕಾರಣ…ರುದ್ರಮುನಿ ಸ್ವಾಮೀಜಿ ಭವಿಷ್ಯ..!

ತಿಪಟೂರು: ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪನವರೇ ಮುಖ್ಯ ಕಾರಣವಾಗಿದ್ದು ಯಾವುದೇ ಕಾರಣಕ್ಕೂ ಅವರನ್ನು ಹುದ್ದೆಯಿಂದ ಕೆಳಗಿಳಿಸಿದ್ದು ಆದಲ್ಲಿ ಇಡೀ ವೀರಶೈವ ಸಮಾಜದ ಸ್ವಾಮೀಜಿಗಳು ಪಕ್ಷದ ವಿರುದ್ಧ ತಿರುಗಿ ಬೀಳುವುದರಲ್ಲಿ ಯಾವುದೇ ಸಂದೇಹವಿಲ್ಲ ಎಲ್ಲಿಯವರೆಗೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿರುತ್ತಾರೆ ಅಲ್ಲಿಯವರೆಗೂ ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿರುತ್ತದೆ ಎಂದು ತಿಪಟೂರು ರುದ್ರಮುನಿ ಸ್ವಾಮೀಜಿ ಭವಿಷ್ಯ ನುಡಿದರು. ಇದೇ ವೇಳೆ ಮಾಧ್ಯಮದ ಮುಂದೆ ಮಾತನಾಡಿದ ತಮ್ಮಡಿಹಳ್ಳಿ ಗುರುಗಳಾದ ಡಾಕ್ಟರ್ ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ ಒಂದು ವೇಳೆ ಯಡಿಯೂರಪ್ಪನವರನ್ನು ಕೆಳಗಿಳಿಸಿದ್ದೇ ಆದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಪತನಗೊಂಡು ಮುಂದೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲವೆಂದು ಭವಿಷ್ಯ ನುಡಿದಿದ್ದು, ಈ ವೇಳೆ ಸುಮಾರು ಹತ್ತಕ್ಕೂ ಹೆಚ್ಚು ಮಠಾಧೀಶರು ಆಗಮಿಸಿದ್ದರು.

ವರದಿ- ಸಿದ್ದೇಶ್ವರ ಸಿ.ಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Please follow and like us:

Related posts

Leave a Comment