ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನಲೆ ಉಸ್ತುವಾರಿ ಸಚಿವರಿಂದ ತುರ್ತು ಸಭೆ..!

ಶಿರಾ:-ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಸಿ. ಮಾಧುಸ್ವಾಮಿ ಇಂದು ನಗರದ ನಗರಸಭೆಯಲ್ಲಿ ಅಧಿಕಾರಿ ವರ್ಗದವರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಮಧುಗಿರಿ ಉಪವಿಭಾಗ ಅಧಿಕಾರಿ ಡಾ:ನಂದಿನಿ ದೇವಿ. ತಹಶಿಲ್ದಾರ್ ನಾಹಿದಾ ಜಮ್ ಜಮ್ ಮತ್ತು ನಗರಸಭೆ ಅಧಿಕಾರಿಗಳೊಂದಿಗೆ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತಂತೆ ತುರ್ತು ಸಭೆ ನಡೆಸಲಾಯಿತು. ಈ ವೇಳೆ ಸಭೆಯಲ್ಲಿ ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ, ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ಹಾಗೂ ಸೋಂಕಿತ ಸಂಪರ್ಕ ಹೊಂದಿದೆ ವ್ಯಕ್ತಿಗಳು ಮಾಹಿತಿ ಮತ್ತು ನಿಗ್ಗಾ ವಹಿಸುವಿಕ್ಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದು, ಸೂಕ್ತ ನಿರ್ದೇಶನ ನೀಡಲಾಗಿದ್ದು ಈ ತುರ್ತು ಸಭೆಯಲ್ಲಿ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಇನ್ನೂ ಅನೇಕ ಅಧಿಕಾರಿಗಳು ಭಾಗಿಯಾಗಿದ್ದು, ಸಭೆಯಲ್ಲಿ ನಗರದ ಕೋವಿಡ್ ಕೇರ್ ಸೆಂಟರ್ಗಳಲ್ಲಿನ ನಿರ್ವಹಣೆ ಕುರಿತಾದ ತುರ್ತು ಸಮಾಲೋಚನೆ ನಡೆಸಲಾಯಿತು. ಇತ್ತೀಚೆಗೆ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದೆ. ಆದರೆ ನಗರದ ಆಸ್ಪತ್ರೆಗಳು ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳು ಸೋಂಕಿತರ ವಿಚಾರದಲ್ಲಿ ನಿಗಾವಹಿಸುವಂತೆ ಸೂಚನೆ ನೀಡಿದರು. ನಂತರ ಅವರು ಅಧಿಕಾರಿ ವರ್ಗದವರೊಂದಿಗೆ ನಗರದ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ಭೇಟೆ ನೀಡಿ ಅಲ್ಲಿಯ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು ಎಂದು ತಿಳಿದುಬಂದಿದೆ..

ವರದಿ: ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ

Please follow and like us:

Related posts

Leave a Comment