ಜೆಡಿಎಸ್ ಶಾಸಕ ಆರೋಗ್ಯದಲ್ಲಿ ಏರುಪೇರು : ಸ್ಥಿತಿ ಗಂಭೀರ..!

ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ತಾಲೂಕಿನ ಜೆಡಿಎಸ್ ಶಾಸಕ ಸತ್ಯನಾರಾಯಣ ಸ್ಥಿತಿ ಗಂಭೀರವಾಗಿದ್ದು, ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯನಾರಾಯಣ ಅವರನ್ನ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿವರ್ ಸಮಸ್ಯೆ ಹಾಗು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾಗಿರುವುದರಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕರು ಮೃತಪಟ್ಟಿಲ್ಲ ಅವರ ಸ್ಥಿತಿ ಗಂಭೀರವಾಗಿದೆ ಇನ್ನು ಮಧ್ಯಾಹ್ನ 12.30 ಕ್ಕೆ ನಿಧನರಾಗಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಎಲ್ಲಾ ಮಾಧ್ಯಮಗಳಲ್ಲಿ ನಿಧನರಾಗಿದ್ದಾರೆ ಎಂದು ಸುದ್ದಿ ಬಿತ್ತರಿಸಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಮಣಿಪಾಲ ಆಸ್ಪತ್ರೆ ವೈದ್ಯರು, ಸತ್ಯನಾರಾಯಣ ಅವರ ಆರೋಗ್ಯ ಬಹಳಷ್ಟು ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ವರದಿ- ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ

Please follow and like us:

Related posts

Leave a Comment