ರಾಮಮಂದಿರ ನಿರ್ಮಾಣದ ಹಿನ್ನೆಲೆ ತುಮಕೂರಿನಲ್ಲಿ ಮಧ್ಯ ಮಾರಾಟ ನಿಷೇಧ..!

ತುಮಕೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಲಿಸರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಈ ನಾಲ್ಕು ತಾಲ್ಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾದ್ಯಂತ ಹಿಂದೂಪರ ಸಂಘಟನೆಗಳು ದೇವಸ್ಥಾನಗಳಲ್ಲಿ ವಿಜಯೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಈ ಸಮಯದಲ್ಲಿ ಯಾವುದೇ ರೀತಿಯ ಒಂದು ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಾಂತಿ ಕಾಪಾಡುವ ಉದ್ದೇಶದಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಮಧ್ಯ ನಿಷೇದ ಮಾಡಲಾಗಿದೆ. ಜಿಲ್ಲೆಯ ತುಮಕೂರು, ಸಿರಾ, ತಿಪಟೂರು, ಕುಣಿಗಲ್ ತಾಲ್ಲೂಕುಗಳು ಮತೀಯ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಆಗಸ್ಟ್ 5ರ ರಾತ್ರಿ 12 ಗಂಟೆಯವರೆಗೆ ನಾಲ್ಕು ತಾಲ್ಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ ಕೆ. ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ವರದಿ-ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ

Please follow and like us:

Related posts

Leave a Comment