ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ, ಕೋಟೆ ರಾಮಮಂದಿರದಲ್ಲಿ ರಾಮನಿಗೆ ವಿಶೇಷ ಪೂಜೆ…!

ಮಳವಳ್ಳಿ: ಅಯೋಧ್ಯೆ ರಾಮಮಂದಿರ ನಿರ್ಮಿಸಲು ಭೂಮಿ ಪೂಜೆ ಮಾಡುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ತಾಲ್ಲೂಕು ಘಟಕವತಿಯಿಂದ ಮಳವಳ್ಳಿ ಪಟ್ಟಣದ ಕೋಟೆ ರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಳವಳ್ಳಿ ಬಿಜೆಪಿ ಪಕ್ಷದ ತಾಲ್ಲೂಕು ಅಧ್ಯಕ್ಷ. ಎಂ.ಎನ್ ಕೃಷ್ಣ ನೇತೃತ್ವದಲ್ಲಿ ಪಟ್ಟಣದ ಕೋಟೆ ಬೀದಿಯಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪ್ರಥಮ ಪೂಜೆ ಸಲ್ಲಿಸಿ ಬಳಿಕ ಪಕ್ಕದಲ್ಲಿರುವ ಶ್ರೀ ರಾಮಮಂದಿರದಲ್ಲಿ ಪೂಜೆ ಸಲ್ಲಿಸಲಾಯಿತು. ಇದೇ ವೇಳೆ ಈ ಹಿಂದೆ ಅಯೋಧ್ಯೆಗೆ ತೆರಳಿದ್ದ ಬಿಜೆಪಿ ಹಿರಿಯ ಮುಖಂಡ ಅಪ್ಪಾಜೀಗೌಡ , ಹಾಗೂ ಮುದ್ದಮಲ್ಲುರವರಿಗೆ ಸನ್ಮಾನ ಕೂಡ ಮಾಡಲಾಯಿತು. ಇನ್ನೂ ತಾಲ್ಲೂಕು ಬಿಜೆಪಿ ಅಧ್ಯಕ್ಷ ಎಂ.ಎನ್ ಕೃಷ್ಣ ಮಾಧ್ಯಮದೊಂದಿಗೆ ಮಾತನಾಡಿ, ದೇಶದ ಪ್ರಧಾನಿ ಮೋದಿಜೀರವರು ಪ್ರಭು ರಾಮದೇವರ ಜನ್ಮಭೂಮಿಯಲ್ಲಿ ಭೂಮಿ ಪೂಜೆ ಸಲ್ಲಿಸಿದ್ದು, ಸಾರ್ವಜನಿಕರಿಗೆ ಮಾಸ್ಕ್ ವಿತರಿಸುವುದರ ಜೊತೆಗೆ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಸಾಧನೆಯ ಕರಪತ್ರದ ಜೊತೆಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂಧರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಎಂ.ಎನ್ ಕೃಷ್ಣ, ಬಿಜೆಪಿ ಪ್ರಧಾನಕಾರ್ಯದರ್ಶಿ ಕೆ.ಸಿ ನಾಗೇಗೌಡ, ಪುರಸಭೆ ಸದಸ್ಯ ವೇಣು, ದೇವರಾಜು, ರಾಜಣ್ಣ, ಅಶ್ರಫ್, ಮಹೇಶ್ ಸೇರಿದಂತೆ ಮತ್ತಿತ್ತರರು ಉಪಸ್ಥೀತರಿದ್ದರು.

ವರದಿ:ಎ. ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ .

Please follow and like us:

Related posts

Leave a Comment