ಹೊಳೆನರಸೀಪುರ

ಆಗಸ್ಟ್ 15 ರಂದು ಸರಳ ಸ್ವಾತಂತ್ರ್ಯ ದಿನಾಚರಣೆಗೆ ತಾಲ್ಲೂಕು ಆಡಳಿತದ ಸಂಕಲ್ಪ, ಕೊರೋನ ವಾರಿಯರ್ಸ್ ಗೆ ಗೌರವಿಸಲು ನಿರ್ಧಾರ.

Published

on

ಹೊಳೆನರಸೀಪುರ: ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಇಂದು ಇದೇ ಆಗಸ್ಟ್ 15 ರ ಶನಿವಾರದಂದು ನಡೆಯಲಿರುವ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ಸಲುವಾಗಿ ತಹಸೀಲ್ದಾರ್ ಕೆ.ಆರ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸಭೆಯನ್ನು ಕರೆಯಲಾಗಿತ್ತು.ಈ ಬಾರಿ ಕೋವಿಡ್ – 19 ಹಾವಳಿಯಿಂದ ಜನತೆ ಸಂಕಷ್ಟದ ಪರಿಸ್ಥಿತಿಯಲ್ಲಿ ಇರುವಾಗ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ತೀರ್ಮಾನಿಸಲಾಯಿತು. ಪ್ರತಿ ವರ್ಷದಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಬೆಳಿಗ್ಗೆ 7 ಗಂಟೆಗೆ ತ್ರಿವರ್ಣ ಧ್ವಜಾರೋಹಣ ನಡೆಸಿ ನಂತರ ಮೆರವಣಿಗೆ ಮೂಲಕ ತಾಲ್ಲೂಕು ಕಛೇರಿಯಿಂದ ಹೊರಟು ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಜಯಚಾಮರಾಜೇಂದ್ರ ವೃತ್ತದ ಬಳಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಬಯಲು ರಂಗ ಮಂದಿರದಲ್ಲಿ ಸಮಾವೇಷಗೊಂಡು 8- 30 ಕ್ಕೆ ತ್ರಿವರ್ಣ ಧ್ವಜಾರೋಹಣವನ್ನು ಮಾಡಲಾಗುತ್ತದೆ, ಈ ಸಂದರ್ಭದಲ್ಲಿ ರಾಷ್ಟ್ರಗೀತೆ, ನಾಡಗೀತೆ, ವಂದೇ ಮಾತರಂ ಹಾಡಲು ಸಭೆ ನಿರ್ಣಯ ತೆಗೆದುಕೊಂಡಿತು. ಈ ಬಾರಿ ಶಾಲಾ ಮಕ್ಕಳ ಭಾಗವಹಿಸುವಿಕೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ, ಮತ್ತು ಯಾವುದೇ ಪಥ ಸಂಚಲನ ಇರುವುದಿಲ್ಲ, ಧ್ವಜಾರೋಹಣ ವ್ಯವಸ್ಥೆಯನ್ನು ಠಾಣಾಧಿಕಾರಿಗಳು, ಗೃಹ ರಕ್ಷಕ ದಳದವರು ನಿರ್ವಹಣೆ ಮಾಡುತ್ತಾರೆ, ಸಮಾರಂಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ,ಮತ್ತು ಸ್ಥಳದಲ್ಲಿ ಒಂದು ಆಂಬುಲೆನ್ಸ್ ಇರಲಿದ್ದು ತುರ್ತು ಪರಿಸ್ಥಿತಿಯನ್ನು ನಿಭಾಯಿಸಲಾಗುತ್ತದೆ, ವೇದಿಕೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹೆಚ್.ಡಿ.ರೇವಣ್ಣನವರು ವಹಿಸಲಿದ್ದು, ಈ ಬಾರಿ ಹೊಳೆನರಸೀಪುರ ತಾಲ್ಲೂಕಿನಲ್ಲಿ ಕೊರೋನ ಮಹಾಮಾರಿಯ ವಿರುದ್ಧ ಹೋರಾಡಿದ ಕನಿಷ್ಠ 10 ಕೊರೋನ ವಾರಿಯರ್ಸ್ ಗೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸಲು ತೀರ್ಮಾನಿಸಲಾಗಿದೆ, ಅವರಲ್ಲಿ ಆರಕ್ಷಕ ಇಲಾಖೆ, ಪುರಸಭೆ, ಆರೋಗ್ಯ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರಮುಖರೊಬ್ಬರು ಮತ್ತು ತಾಲ್ಲೂಕು ಕಚೇರಿಯ ಸಿಬ್ಬಂದಿ ಸೇರಿದ್ದಾರೆ, ಈ ಸ್ವಾತಂತ್ರ್ಯ ದಿನದ ಸುಸಂದರ್ಭದಲ್ಲಿ ಪ್ರತಿಷ್ಠಿತ ಸೋಷಿಯಲ್ ಕ್ಲಬ್ ವತಿಯಿಂದ ಈ ಬಾರಿ ಪಿ.ಯು.ಸಿ.ಪರೀಕ್ಷೆಯಲ್ಲಿ ವಾಣಿಜ್ಯ. ಕಲಾ ,ಮತ್ತು ವಿಜ್ಞಾನ ವಿಭಾಗದಲ್ಲಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತರಿಗೆ ತಲಾ ರೂ 2000/- ರೂ ನಗದು ಪುರಸ್ಕಾರ ನೀಡಲಾಗುತ್ತದೆ ಎಂದು ಸೋಷಿಯಲ್ ಕ್ಲಬ್ ನ ಶಂಕರ ನಾರಾಯಣ ಐತಾಳ್ ಸಭೆಯ ಗಮನಕ್ಕೆ ತಂದರು. ಇಂದಿನ ಸಭೆಯಲ್ಲಿ ತಾಲ್ಲೂಕು ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯೋಗೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್,ಪುರಸಭಾ ಪ್ರಭಾರ ಮುಖ್ಯಾಧಿಕಾರಿಗಳಾದ ವಿ.ಡಿ.ಶಾಂತಲಾ ಟೌನ್ ಪೋಲಿಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕುಮಾರ್ ಮತ್ತು ಇನ್ನಿತರ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಮತ್ತು ಪ್ರಮುಖರು ಭಾಗವಹಿಸಿದ್ದರು,

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version