ಎಪಿಎಂಸಿ ಅಧ್ಯಕ್ಷರಾಗಿದ್ದ ಮಡೆನೂರು ಲಿಂಗರಾಜು ವಿಧಿವಶ..!

ತಿಪಟೂರು: ಎಪಿಎಂಸಿ ಅಧ್ಯಕ್ಷರಾಗಿದ್ದ ಮಡೆನೂರು ಲಿಂಗರಾಜು ಅವರು ಅನಾರೋಗ್ಯದಿಂದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ತಾಲ್ಲೂಕಿನಲ್ಲಿ ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದ ಇವರು ಮಡೇನೂರು ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದರು. ಮೊದಲ ಬಾರಿಗೆ ಎಪಿಎಂಸಿ ಚುನಾವಣೆಯಲ್ಲಿ ಮೊದಲ ಬಾರಿಗೆ ಅಧ್ಯಕ್ಷರಾಗಿದ್ದು ಉತ್ತಮ ಕೆಲಸ ಕಾರ್ಯ ನಡೆಸಿದ್ದಾರೆ. ಇನ್ನು ಇವರ ಅಗಲಿಕೆಗೆ ಮಾಜಿ ಶಾಸಕರಾದ ನಂಜಾಮರಿ, ಬಿಜೆಪಿ ಮುಖಂಡ ಲೋಕೇಶ್ವರ, ಮಾಜಿ ಎಪಿಎಂಸಿ ಅಧ್ಯಕ್ಷರಾದ ಎಸ್ಪಿ ದಿವಾಕರ್, ಮತ್ತು ಜನಸ್ಪಂದನ ಟ್ರಸ್ಟ್ ಅಧ್ಯಕ್ಷರಾದ ಸಿಬಿ ಶಶಿಧರ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಡೇನೂರು ಕಾಂತರಾಜು ಮತ್ತು ಎಪಿಎಂಸಿ ಉಪಾಧ್ಯಕ್ಷ ಬಜಗೂರು ಮಂಜುನಾಥ್ ಇನ್ನು ಮುಂತಾದವರು ಸಂತಾಪ ಸೂಚಿಸಿದ್ದಾರೆ.

ವರದಿ-ಸಿದ್ದೇಶ್ ಸಿ.ಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು

Please follow and like us:

Related posts

Leave a Comment