ಕೊರೊನಾ ಸೋಂಕಿಗೆ ಹೆದರಿ ಮಹಿಳೆ ಆತ್ಮಹತ್ಯೆ!


ಮಂಡ್ಯ : ಕೊರೊನಾ ಸೋಂಕಿಗೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ನಾಗಮಂಗಲ ಮೂಲದ ಪದ್ಮಾವತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ ೪ ರಂದು ಮಹಿಳೆ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಕೊರೊನಾ ಸೋಂಕು ಇರುವ ಬಗ್ಗೆ ತಿಳಿದ ಮಹಿಳೆ ಮನೆ ಬಿಟ್ಟು ಹೋಗಿದ್ದರು. ಗುರುವಾರ ಸಂಜೆ ವಿಸಿ ನಾಲೆಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಸದ್ಯ ಮೃತ ಮಹಿಳೆಯ ಶವ ವಿಮ್ಸ್ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಮಹಿಳೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆ, ಮೃತ ಮಹಿಳೆಯ ವಾಸ ಮಾಡುತ್ತಿದ್ದ ಮನೆಯಲ್ಲಿ ನಾಗಮಂಗಲ ಪುರಸಭೆ ಸಿಬ್ಬಂದಿ ಸೀಲ್ಡೌನ್ ಮಾಡಿದ್ದಾರೆ.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment