ರಾಯಚೂರು

ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು : ಜಿಲ್ಲೆಯಲ್ಲಿ ಪ್ರವಾಹ ಭೀತಿ.

Published

on


ರಾಯಚೂರು : ಮಹಾರಾಷ್ಟ್ರ ದಲ್ಲಿ ಭಾರಿ ಮಳೆ ಹಿನ್ನೆಲೆ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು ಬಿಟ್ಟಿದ್ದರಿಂದ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು ಜಿಲ್ಲಾಡಳಿತ ಪ್ರವಾಹ ಎದುರಿಸಲು ಸನ್ನದ್ಧವಾಗಿದೆ. ಮಹಾರಾಷ್ಟ್ರ ಬೆಳಗಾವಿಯಲ್ಲಿ ಭಾರಿ ಮಳೆಯಿಂದ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು ಎಲ್ಲಾ ಜಲಾಶಯಗಳು ತುಂಬಿದ್ದು ಭಾರಿ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿದೆ. ಇದೀಗ ನಾರಾಯಣಪುರ ಬಸವಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆ ಜಲಾಶಯದಿಂದ ಕೃಷ್ಣ ನದಿಗೆ 1 ಲಕ್ಷ 85 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ರಾಯಚೂರು ಜಿಲ್ಲೆಯ ಲಿಂಗಸುಗೂರು, ದೇವದುರ್ಗ ಮತ್ತು ರಾಯಚೂರು ತಾಲ್ಲೂಕುಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಈಗಾಗಲೇ ಮುಳುಗಡೆಯಾಗಿದ್ದು ಲಿಂಗಸೂಗೂರು ಹಾಗೂ ಶೀಲಹಳ್ಳಿ ಸಂಪರ್ಕ ಕಡಿತವಾಗಿದೆ. ಜೊತೆಗೆ ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿದ್ದು, ಯರಗೋಡ, ಕಡದರಗಡ್ಡೆ,ಯಾನಗುಂದ ಸೇರಿದಂತೆ ವಿವಿಧ ಹಳ್ಳಿಗಳಿಗೆ ಸಂಪರ್ಕ ಕಡಿತವಾಗಿದೆ ಇದರಿಂದ ಗ್ರಾಮಸ್ಥರು ಬಳಸಿಕೊಂಡು ಪ್ರಯಾಣಿಸುವ ಅನಿವಾರ್ಯತೆ ಎದುರಾಗಿದೆ.

ವರದಿ- ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು.

Click to comment

Trending

Exit mobile version