ವಿವಿಧ ಸಂಘ-ಸಂಸ್ಥೆಗಳಿಂದ ಪಿರಿಯಾಪಟ್ಟಣದಲ್ಲಿ ಸ್ವಾತಂತ್ರ ದಿನಾಚರಣೆ ಆಚರಣೆ..!

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಸಂಘ ಸಂಸ್ಥೆಗಳಲ್ಲಿ 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಿದರು.
ಬೆಟ್ಟದ ಪುರದ ಪೊಲೀಸ್ ಠಾಣೆಯ ಠಾಣಾಧಿಕಾರಿ ಪುಟ್ಟರಾಜು ಧ್ವಜಾರೋಹಣ ಮಾಡಿದ ನಂತರ ಸಾರ್ವಜನಿಕರನ ಉದ್ದೇಶಿಸಿ ಮಾತನಾಡಿ ಮಹಾತ್ಮ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರು ಪ್ರಾಣ ತ್ಯಾಗ ಮಾಡಿ 1947 ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರಿಂದ ಸ್ವತಂತ್ರವಾಗಿ ನಾವು ಜೀವನ ನಡೆಸುತ್ತಿದ್ದೇವೆ. ದೇಶದಲ್ಲಿ ಅನೇಕತೆಯಲ್ಲಿ ಏಕತೆಯನ್ನು ಕಾಣುತ್ತಿದ್ದೇವೆ ನಾವೆಲ್ಲ ಭಾರತೀಯರು ಒಂದೇ ಎಂಬ ಭಾವನೆಯಲ್ಲಿ ಪ್ರತಿಯೊಬ್ಬ ನಾಗರಿಕರು ಸ್ವಾತಂತ್ರ್ಯವನ್ನು ಆಚರಿಸುತ್ತಿದ್ದೇವೆ. ಈ ಬಾರಿ ದೇಶದಲ್ಲಿ ಕೊವಿಡ್ 19 ಇರುವುದರಿಂದ ಸರ್ಕಾರದ ಸುತ್ತೋಲೆಯಂತೆ ಸರಳವಾಗಿ ಆಚರಿಸುತ್ತಿದ್ದೇವೆ ಎಂದರು.ಜಯ ಕರ್ನಾಟಕ ಸಂಘಟನೆಯಿಂದ ಸಾರ್ವಜನಿಕರಿಗೆ ಮಾಸ್ಕ್ ಗಳನ್ನು ವಿತರಣೆ ಮಾಡಿ ಸಿಹಿ ಹಂಚಲಾಯಿತು ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಎಂ ಜಿ ಕುಮಾರ್,ಉಪಾಧ್ಯಕ್ಷ ರುದ್ರೇಶ್ ಹೋಬಳಿ ಅಧ್ಯಕ್ಷ ನಟೇಶ್, ಪದಾಧಿಕಾರಿಗಳು ಹಾಜರಿದ್ದರು

Please follow and like us:

Related posts

Leave a Comment