ಕೋಲಾರ

ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಜೆಡಿಎಸ್ ಪ್ರತಿಭಟನೆ

Published

on

ಕೋಲಾರ: ರಾಜ್ಯ ಸರ್ಕಾರ ಸುಗ್ರೀವ ಆಜ್ಞೆ ಮೂಲಕ ರೈತ ವಿರೋಧಿ ನೀತಿ ಕಾಯ್ದೆಗಳನ್ನು ಜಾರಿ ಮಾಡುತ್ತಿದ್ದಾರೆ ಎಂದು ಆಗ್ರಹಿಸಿ ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಂಡವಾಳ ಶಾಹಿಗಳ ಪರವಾಗಿ ನಿಂತಿರುವ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಸುಗ್ರೀವ ಆಜ್ಞೆಯನ್ನು ಬಳಸಿಕೊಂಡು ರೈತರನ್ನು ಕೃಷಿಯಿಂದ ವಿಮುಖಗೊಳಿಸುವಂತ ಕಾಯ್ದೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಭೂ ಸುಧಾರಣೆ ಕಾಯ್ದೆ, ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಕಾಯ್ದೆ, ಕೈಗಾರಿಕಾ ವಾಣಿಜ್ಯ ಕಾಯ್ದೆ ಸೇರಿದಂತೆ ಹಲವು ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುವ ಮೂಲಕ ರೈತರ ಕತ್ತು ಹಿಸುಕಲಾಗುತ್ತಿದೆ ಕೊಡಲೇ ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡುಬೇಕೆಂದು ಆಗ್ರಹಿಸಿದರು. ಇನ್ನೂ ಸಮಾಜಿಕ ಅಂತರ ಪಾಲಿಸದೇ ಗುಂಪುಗುಂಪಾಗಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಹಾಗೂ ಮುಖಂಡರು ಕೋವಿಡ್-19 ನಿಯಮಗಳನ್ನು ಉಲ್ಲುಂಘಿಸಿದ್ರು. ಪ್ರತಿಭಟನೆಯಲ್ಲಿ ಭಾಗಿಯಾದ
ಜೆಡಿಎಸ್ ಆಧ್ಯಕ್ಷ ವೆಂಕಟಶಿವಾರೆಡ್ಡಿ, ಎಂಎಲ್ಸಿ ಗೋವಿಂದ ರಾಜ್, ಶಾಸಕ ಕೆ. ಶ್ರೀನಿವಾಸ್ ಗೌಡ, ಸಮೃದ್ಧಿ ಮಂಜುನಾಥ ಯಾರೂ ಕೊಡ ಕೋವಿಡ್-19 ನಿಯಮಗಳನ್ನು ಪಾಲಿಸದೇ ನಿರ್ಲಕ್ಷ್ಯ ವಹಿಸಿದ್ರು.

ವರದಿ- ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಕೋಲಾರ

Click to comment

Trending

Exit mobile version