ಮಂಡ್ಯ

ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ…!

Published

on

ಮಳವಳ್ಳಿ: ಅ್ಯಂಬುಲೆನ್ಸ್ ಸೇವೆ ಮತ್ತು ರಾತ್ರಿ ಪಾಳಿಯಲ್ಲಿ ವೈದ್ಯಕೀಯ ಸೇವೆ ಕಲ್ಪಿಸಬೇಕು ಮತ್ತು ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಬೇಕೆಂದು ಆಗ್ರಹಿಸಿ
ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಮಳವಳ್ಳಿ ತಾಲ್ಲೂಕಿನ ಹಲಗೂರು ಗ್ರಾಮದ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪತ್ರಿಭಟನೆಯ ನೇತೃತ್ತ ವಹಿಸಿದ್ದ. ಬಿ ಎಸ್ ಪಿ ರಾಜ್ಯಾದ್ಯಕ್ಷರಾದ ಎಂ.ಕೃಷ್ಣಮೂರ್ತಿ ಮಾತನಾಡಿ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೊದಲಿದ್ದ 108 ವಾಹನದ ಸೇವೆಯನ್ನು ಕಳೆದ ಎಂಟು ತಿಂಗಳಿನಿಂದ ನಿಲ್ಲಿಸಲಾಗಿದೆ. ತುರ್ತು ಸಂದರ್ಭದಲ್ಲಿ ಖಾಸಗಿ ವಾಹನಗಳಲ್ಲಿ ಆಸ್ಪತ್ರೆಗೆ ಹೋಗಲು ಬಡ ರೋಗಿಗಳಿಗೆ ಹಣ ಭರಿಸಲು ತುಂಬಾ ತೊಂದರೆಯಾಗುತ್ತಿದೆ ಎಂದು ದೂರಿದರು. ಹಲಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವುದರಿಂದ ಅಪಘಾತಗಳು ಸಂಭವಿಸಿ, ಹಲವರು ತೊಂದರೆ ಅನುಭವಿಸಿದ್ದಾರೆ‌. ರಾತ್ರಿ ಪಾಳಿಯಲ್ಲಿ ವೈದ್ಯರಿಲ್ಲದೇ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ದೊರಕುತ್ತಿಲ್ಲ. ಹಲಗೂರು ಗ್ರಾಮವು ತಾಲ್ಲೂಕಿನ ಬಹು ದೊಡ್ಡ ಹೋಬಳಿ ಕೇಂದ್ರವಾಗಿದ್ದು, ಸುತ್ತಮುತ್ತಲಿನ ನೂರಕ್ಕೂ ಹೆಚ್ಚು ಗ್ರಾಮಗಳ ಸಾರ್ವಜನಿಕರ ತುರ್ತು ಚಿಕಿತ್ಸೆಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ರಾತ್ರಿ ಪಾಳಿಗೆ ವೈದ್ಯರನ್ನು ನೇಮಿಸಬೇಕು. ಹಲಗೂರು ಕೇಂದ್ರ ಸ್ಥಾನದಲ್ಲಿ ಅ್ಯಂಬುಲೆನ್ಸ್ ವಾಹನ ಸೇವೆ ಕಲ್ಪಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಲು ಸರ್ಕಾರ ಕೂಡಲೇ ಗಮನ ಹರಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ತಾಲ್ಲೂ ಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಮಾತನಾಡಿ ಕೂಡಲೇ ಹಲಗೂರಿಗೆ ತುರ್ತು ಚಿಕಿತ್ಸಾ ವಾಹನ ಸೇವೆ ಕಲ್ಪಿಸಲಾಗುವುದು. ಮತ್ತು ರಾತ್ರಿ ಪಾಳಿ ವೈದ್ಯರ ಸೇವೆಯ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷ ಎಚ್.ಸಿ.ಸತೀಶ್, ಜಿಲ್ಲಾ ಕಾರ್ಯದರ್ಶಿ ಎಚ್.ಎನ್.ವೀರಭದ್ರಯ್ಯ, ಉಸ್ತುವಾರಿ ಕಮಲ್ ನಾಸೀರ್ ಷರೀಫ್, ಉಮೇಶ್ ಎಸ್.ಮೌರ್ಯ, ಕೆ.ಬಿ.ಆನಂದ್ ಕುಮಾರ್, ಶಿವಮೂರ್ತಿ ಸೇರಿದಂತೆ ಹಲವರು ಇದ್ದರು.

ವರದಿ: ಎ.ಎನ್ ಲೋಕೇಶ್
ಎಕ್ಸ್‌ಪ್ರೆಸ್‌ ಟಿವಿ
ಮಳವಳ್ಳಿ

Click to comment

Trending

Exit mobile version