ಹಿರಿಯೂರು ಶಾಸಕಿ ಪೂರ್ಣಿಮಾಗೆ ಕೊರೊನಾ ಸೋಂಕು ಧೃಡ.

ಚಿತ್ರದುರ್ಗ : ಕೋಟೆ ನಾಡು ಚಿತ್ರದುರ್ಗದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದೆ. ಇದೀಗ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಪೋಸ್ಟ್ ಮಾಡಿರುವ ಪೂರ್ಣಿಮಾ, ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೊರೊನಾ ಟೆಸ್ಟ್ ಮಾಡಿಸಿದಾಗ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೋಂ ಐಸೊಲೇಷನ್ ಆಗಲಿದ್ದೇನೆ. ಬೇಗ ಗುಣಮುಖವಾಗಿ ಸಂಕಷ್ಟುದ ಸಮಯಲ್ಲಿ ಜನಸೇವೆ ಮಾಡಲು ಶಕ್ತಿ ನೀಡುವಂತೆ ಭಗವಂತನಿಗೆ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.ನನ್ನ ಸಂಪರ್ಕದಲ್ಲಿದ್ದವರು ಎಲ್ಲರೂ ಮೆನ್ನೆಚ್ಚರಿಕೆ ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ‌ ಬೆಂಗಳೂರು

Please follow and like us:

Related posts

Leave a Comment