ಬೆಂಗಳೂರು

ಶಾಸಕ ಜಮೀರ್ ಅಹ್ಮದ್‌ಗೆ ಕೊರೊನಾ ಸೋಂಕು ಧೃಡ..!

Published

on

ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಇದೀಗ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಸ್ವತಃ ಟ್ವೀಟ್ ಮಾಡಿರುವ ಜಮೀರ್ ಅಹ್ಮದ್, ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆ, ಕೊರೊನಾ ಸೋಂಕು ಟೆಸ್ಟ್ ಮಾಡಿಸಿದ್ದೆ. ಇಂದು ಬಂದ ವರದಿಯಲ್ಲಿ ಧೃಡಪಟ್ಟಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ನಾನು ಕೆಲವು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ. ಅಲ್ಲದೇ ತನ್ನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿಮಾಡಿದ್ದಾರೆ. ಇತ್ತೀಚೆಗಷ್ಟೇ ಶಾಸಕ ಜಮೀರ್ ಅಹ್ಮದ್ ಡಿ.ಜೆ ಹಳ್ಳಿಗೆ ಭೇಟಿ ನೀಡಿದ್ದರು.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version