ಹಾಡಹಗಲೇ ಗ್ರಾಮ ಪಂಚಾಯತಿ ಸದಸ್ಯನ ಕೊಲೆ: ಬೈಕಲ್ಲಿ ಬಂದವರಿಂದ ಕೃತ್ಯ..

ಲಿಂಗಸೂಗೂರು: ರಾಜಕೀಯವಾಗಿ ಸೋಲಿಸಲಾಗದವರು ಗ್ರಾಮ ಪಂಚಾಯತಿ ಚುನಾವಣೆ ಮತ್ತೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹಾಡುಹಗಲೇ ಮಾಜಿ ಗ್ರಾ.ಪಂ.ಸದಸ್ಯನ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲೂಕಿನ ಗೌಡೂರು-ಗುರುಗುಂಟ ಮಧ್ಯೆ ನಡೆದಿದೆ.
ಪೈದೊಡ್ಡಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ಹನುಮಂತ ಎಂಬ ವ್ಯಕ್ತಿಯ ಕೊಲೆ ನಡೆದಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.
ಹರಿತವಾದ ಆಯುಧಗಳಿಂದ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಹನಮಂತ ಸಾವಿಗೀಡಾಗಿದ್ದಾನೆ. ರಸ್ತೆಯ ಮಧ್ಯೆ ರಕ್ತದ ಮಡುವಿನಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಹಟ್ಟಿ ಚಿನ್ನದ ಗಣಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಬೈಕ್ ಹೋಗಿರುವ ಮಾರ್ಗದ ಬಗ್ಗೆ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ರಸ್ತೆಯಲ್ಲೇ ಬಿದ್ದ ಹನಮಂತನ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ವರದಿ-ವೀರೇಶ್ ಅರಮನಿ ಎಕ್ಸ್‌ಪ್ರೆಸ್‌ ಟಿವಿ ಲಿಂಗಸೂಗೂರು..

Please follow and like us:

Related posts

Leave a Comment