ಸಿಂಧನೂರು

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ವಸತಿ ನಿಲಯ ವಿದ್ಯಾರ್ಥಿಗಳ ಸಾಧನೆ…!!

Published

on

ಸಿಂಧನೂರು : ಜಿಲ್ಲೆಯಲ್ಲಿ ವಸತಿ ನಿಲಯಗಳಲ್ಲಿದ್ದು ವ್ಯಾಸಂಗ ಮಾಡುತ್ತಿತ್ತ ವಿದ್ಯಾರ್ಥಿಗಳು SSLS ಪರೀಕ್ಷೆಯಲ್ಲಿ ಶೇಕಡಾ 75.70% ರಷ್ಟು ಫಲಿತಾಂಶ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದು ಸರ್ಕಾರದ ಸದುದ್ದೇಶ ಈಡೇರಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಮುಖ್ಯ ಅಧಿಕಾರಿ ಶ್ರೀಮತಿ ವಿಜಯ.ಕೆ ತಿಳಿಸಿದರು. ಸರ್ಕಾರವು ಯಾವೊಬ್ಬ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ವಸತಿ ನಿಲಯ ಗಳನ್ನು ಸ್ಥಾಪಿಸಿದೆ. ಅದರಲ್ಲಿ ಒಂದಾದ ಸಮಾಜ ಕಲ್ಯಾಣ ಇಲಾಖೆಯು ಸಿಂಧನೂರು ನಗರ ಹಾಗೂ ಗ್ರಾಮೀಣ ಭಾಗ ಸೇರಿದಂತೆ ಒಟ್ಟು 6 ವಸತಿ ನಿಲಯಗಳು ಇದ್ದು, ಈ ವಸತಿ ನಿಲಯದಲ್ಲಿ ಬಹುತೇಕವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುವ ವಸತಿ ನಿಲಯಕ್ಕೆ ಪ್ರವೇಶವನ್ನು ಪಡೆದುಕೊಂಡು. ಇಲಾಖೆ ಕೊಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ವ್ಯಾಸಂಗ ಮಾಡಿ ಪ್ರತಿ ವರ್ಷವೂ ಎಸ್. ಎಸ್. ಎಲ್. ಸಿ ಪರೀಕ್ಷೆ ಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ರೂಪಿಸಿ ಕೊಂಡಿದ್ದಾರೆ. ಅದರಂತೆ ಪ್ರಸಕ್ತ ವರ್ಷವೂ ಕೂಡ ಸಮಾಜ ಕಲ್ಯಾಣ ಇಲಾಖೆ ನಡೆಸುವ ವಸತಿ ನಿಲಯ ದಲ್ಲಿ ಪ್ರವೇಶ ಪಡೆದು ವ್ಯಾಸಂಗ ಮಾಡಿದ
ಎಲ್ಲಾ ವಿದ್ಯಾರ್ಥಿಗಳು ಎಸ್. ಎಸ್. ಎಲ್.ಸಿ ಪರೀಕ್ಷೆ ಯಲ್ಲಿ ಶೇಕಡಾ 75.70% ರಷ್ಟು ಫಲಿತಾಂಶ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಮುಖ್ಯ ಅಧಿಕಾರಿ ಶ್ರೀಮತಿ ವಿಜಯ ಕೆ ಪತ್ರಿಕೆ ಗೆ ತಿಳಿಸಿದರು.

ವರದಿ-ಸೈಯದ್ ನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Click to comment

Trending

Exit mobile version