ಕೋವಿಡ್ ಹೆಸರಿನಲ್ಲಿ ಬಿಜೆಪಿ‌ ಸರ್ಕಾರದ ಅವ್ಯವಹಾರ…ಪಕ್ಷದ ವಿರುದ್ದ ಗುಡುಗಿದ ಕಾಂಗ್ರೇಸ್ ಪಕ್ಷದ ಮಾಜಿ‌ ಸಚಿವ…!

ಶಿರಾ:-ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಕೋವಿಡ್ ಹೆಸರಲ್ಲಿ ಭಾರೀ ಪ್ರಮಾಣದಲ್ಲಿ ಅವ್ಯವಹಾರ ನಡೆಸುತ್ತಿದೆ ಎಂದು ಕಾಂಗ್ರೇಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ ಆರೋಪಿಸಿದರು.ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ
ರಾಜ್ಯ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ, ಕೊರೊನಾ ನಿರ್ವಹಣೆ ಭ್ರಷ್ಟಾಚಾರ ಹಾಗೂ ನೆರೆ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ಕೊರೊನಾ ಸೋಂಕು ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲಾಗಿದೆ.ಸುಮಾರು 2 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ.. ಎಂದು ಆರೋಪಿಸಿದ್ದಾರೆ.ಇದೆ ಸಂದರ್ಭದಲ್ಲಿ
ತಹಶಿಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಿಸಿದ್ದು, ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಬರಗೂರು ನಟರಾಜ್. ನಗರ ಅಧ್ಯಕ್ಷ ಪಿ.ಅರ್. ಮಂಜುನಾಥ್ . ಸೇರಿದಂತೆ
ತಾಲ್ಲೂಕು ಕಾಂಗ್ರೆಸ್ ವಿವಿಧ ಘಟಕದ ಸದಸ್ಯರು ಪ್ರತಿಭಟನೆಯಲ್ಲಿ ಹಾಜರಿದ್ದರು.

ವರದಿ-ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ

Please follow and like us:

Related posts

Leave a Comment