ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನಿಗೆ ಅವಮಾನ…. ಕಿಡಿಗೇಡಿಗಳ ಬಂಧನಕ್ಕಾಗಿ ಆಗ್ರಹ..!

ಶಹಾಪುರ : ಸ್ವಾಭಿಮಾನಿ ಕೆಚ್ಚೆದೆಯ ವೀರ ಸ್ವಾತಂತ್ರ್ಯ ಹೋರಾಟಗಾರ ಕಿತ್ತೂರು ರಾಣಿ ಚನ್ನಮ್ಮಳ ಬಲಗೈ ಬಂಟನಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಿಗೆ ಬೆಳಗಾವಿಯಲ್ಲಿ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿ ಕೊಳ್ಳಲಾಗಿತ್ತು. ಶಹಾಪುರ ತಾಲ್ಲೂಕು ದಂಡಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಕಿಡಿಗೇಡಿಗಳನ್ನು ಬಂಧಿಸಿ ಎಷ್ಟೇ ಪ್ರಬಲ ರಾದರೂ ಅವರಿಗೆ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಯಿತು. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟು ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಧೀರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಯೊಬ್ಬರಿಗೂ ಸ್ಫೂರ್ತಿಯ ಚಿಲುಮೆ ಆಗಿದ್ದಾರೆ. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಡಾ: ಭೀಮಣ್ಣ ಮೇಟಿ,ದೇವು ಬೀ. ಗುಡಿ ಹಾಗೂ ಸಮಾಜದ ಎಲ್ಲ ಬಾಂಧವರು ಉಪಸ್ಥಿತರಿದ್ದರು.

ವರದಿ-ಬಸವರಾಜ್ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ

Please follow and like us:

Related posts

Leave a Comment