ಕೊರೊನಾ ಗೆದ್ದ ಎಸ್ ಪಿಬಿ…ಕೊನೆಗೂ ಫಲಿಸಿತು ಕೋಟ್ಯಾಂತರ ಜನರ ಪ್ರಾರ್ಥನೆ..!

ಚೆನ್ನೈ : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಎಸ್ಪಿ ಬಾಲಸುಬ್ರಹ್ಮಣ್ಯಂ ರವರಿಗೆ ಕೊನೆಗೂ ಸೋಂಕು ನಿವಾರಣೆಯಾಗಿದೆ.ಎಸ್ಪಿಬಿ ಅವರಿಗೆ ಇಂದು ಕೊರೊನಾ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದ್ದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಎಂಜಿಎಂ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ 19 ದಿನಗಳಿಂದಲೂ ಚಿಕಿತ್ಸೆಯನ್ನು ಪಡೆಯುತ್ತಿರುವ ಎಸ್.ಪಿ.ಬಾಲಸುಬ್ರಹ್ಮಣಂ ಆರೋಗ್ಯ ಸಂಪೂರ್ಣವಾಗಿ ಹದಗೆಟ್ಟಿತ್ತು.ಈ ಹಿನ್ನೆಲೆ ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದು, ದೇಶದ ತಜ್ಞ ವೈದ್ಯರ ಜೊತೆಗೆ ವಿದೇಶಿ ತಜ್ಞರ ಸಹಕಾರದೊಂದಿಗೆ ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಇದೀಗ ಎಸ್.ಪಿ.ಬಿ ಅವರು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖವಾಗಿದ್ದಾರೆಂದು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪುತ್ರ ಚರಣ್ ತಿಳಿಸಿದ್ದಾರೆ.ಆದರೆ ಕೊರೊನಾ ವೈರಸ್ ಸೋಂಕಿನ ವರದಿ ನೆಗೆಟಿವ್ ಬಂದಿದ್ದರೂ ಕೂಡ 9 ದಿನಗಳ ಕಾಲ ಆಸ್ಪತ್ರೆಯಲ್ಲೇ ಎಸ್ ಪಿಬಿ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು ಸಂಪೂರ್ಣವಾಗಿ ಗುಣಮುಖರಾದ ಮೇಲೆ ಡಿಸ್ಚಾರ್ಜ್ ಮಾಡುವುದಾಗಿ ವೈಧ್ಯರು ತಿಳಿಸಿದ್ದಾರೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು.

Please follow and like us:

Related posts

Leave a Comment