Uncategorized

ಆಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.. ಸೋನಿಯಾ ಗಾಂಧಿ ದಿಟ್ಟ ನಿರ್ಧಾರ..!

Published

on

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಅವರ ತಾತ್ಕಾಲಿಕ ಅಧಿಕಾರ ಅವಧಿ ಇಂದು ಮುಕ್ತಾಯವಾಗಲಿದ್ದು, ಸೋನಿಯಾ ಗಾಂಧಿ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಈ ಪ್ರಶ್ನೆಗೆ ಉತ್ತರ ಸಿಗುವ ನಿರೀಕ್ಷೆಯಿದೆ, ಸಭೆಯಲ್ಲಿ ಗುಲಾಂ ನಬಿ ಆಜಾದ್ ಸೇರಿದಂತೆ 23 ಮಂದಿ ಹಿರಿಯ ನಾಯಕರು ಪಕ್ಷದ ನಾಯಕತ್ವ ಬದಲಾವಣೆ ಕುರಿತಂತೆ ಬರೆದಿರುವ ಪತ್ರದ ಬಗ್ಗೆ ಸೋನಿಯಾ ಗಾಂಧೀ ಉಲ್ಲೇಖಿಸಿದ್ದಾರೆ. ಇನ್ನೂ ಸಭೆ ಆರಂಭದಲ್ಲಿಯೇ ಸೋನಿಯಾ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಸಮಸ್ಯೆ ಶೀಘ್ರದಲ್ಲೇ ಇತ್ಯರ್ಥವಾಗಲಿದೆ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಮಧ್ಯಂತರ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡರು ಸುಳಿವು ನೀಡಿದ್ದಾರೆ.ಆದರೆ ಸೋನಿಯಾ ಗಾಂಧಿ ಆರೋಗ್ಯದ ಸಮಸ್ಯೆಯಿಂದ ಹಂಗಾಮಿ ಅಧ್ಯಕ್ಷೆಯಾಗಿ ಮುಂದುವರಿಯಲು ಸೋನಿಯಾ ಗಾಂಧೀ ಒಪ್ಪದಿದ್ದರೆ, ಹಿರಿಯ ಕಾಂಗ್ರೆಸ್ ಮುಖಂಡರಾದ ಮನಮೋಹನ್ ಸಿಂಗ್, ಎ.ಕೆ.ಆಂಟನಿ, ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಶಿಂಧೆ, ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version