Uncategorized

ಮಾನವೀಯತೆ ಮೆರೆದ ನಾಗಮಂಗಲ ತಹಶೀಲ್ದಾರ್..!

Published

on

ನಾಗಮಂಗಲ: ಕೊರೋನಾ ಸೋಂಕು ಪತ್ತೆಯಾಗಿ ಮೃತಪಟ್ಟಿದ್ದ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ತಾಲ್ಲೂಕು ಕೋವಿಡ್ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ಕುಂಞ ಅಹಮ್ಮದ್ ಭಾಗಿಯಾಗುವ ಮೂಲಕ ಮಾನವೀಯತೆ ಮರೆದಿರುವ ಘಟನೆ ತಾಲ್ಲೂಕಿನ ಕಸಬಾ ಹೋಬಳಿ, ಗೌಡರಹಳ್ಳಿ ಗ್ರಾಮ ಸಾಕ್ಷಿಯಾಗಿದೆ. ಕೊರೊನಾ ಗುಣಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಇದೇ ಆ.17 ರಂದು ತಾಲ್ಲೂಕಿನಲ್ಲಿರುವ ಬಿಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿದ್ದ 70 ವರ್ಷದ ವಯೋವೃದ್ದನಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ತದನಂತರ 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆದಿದ್ದು ಗುಣಲಕ್ಷಣಗಳು ಉಲ್ಭಣಗೊಂಡು ಚಿಕಿತ್ಸೆ ಫಲಿಸದೆ ಆ.23 ರ ಭಾನುವಾರ ರಾತ್ರಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಕುಟುಂಬಸ್ಥರ ಕೋರಿಕೆಯಂತೆ ಗೌಡರಹಳ್ಳಿ ಹೊರವಲಯದ ತಮ್ಮ ಜಮೀನಿನಲ್ಲಿ ಕೋವಿಡ್ ನಿಯಮಾನುಸಾರ ಹಾಗೂ ಮೃತ ವ್ಯಕ್ತಿ ಕುಟುಂಬದ ಸಂಪ್ರದಾಯದಂತೆ ತಹಸೀಲ್ದಾರ್ ಕುಂಞ ಅಹಮ್ಮದ್ ನೇತೃತ್ವದಲ್ಲಿ ಸ್ಥಳೀಯ ಆರ್.ಎಸ್.ಎಸ್ ಸ್ವಯಂ ಸೇವಕರು ಅಂತ್ಯಕ್ರಿಯೆ ನೆರವೇರಿಸಿದರು. ತಹಸೀಲ್ದಾರ್ರವರ ಈ ಕಾರ್ಯಕ್ಕೆ ತಾಲ್ಲೂಕಿನಾಧ್ಯಂತ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಕೋವಿಡ್ನಿಂ್ದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು ನನಗೆ ವೈಯಕ್ತಿಕವಾಗಿ ಆತ್ಮತೃಪ್ತಿ ತಂದಿದೆ. ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸುವುದಕ್ಕೆ ಸಾರ್ವಜನಿಕರಲ್ಲಿ ಯಾವುದೇ ಆತಂಕ ಬೇಡ. ಈ ರೋಗದಿಂದ ನಶಿಸುತ್ತಿರುವ ಮಾನವೀಯ ಮೌಲ್ಯ ಇನ್ನು ಮುಂದಾದರೂ ಪುನಶ್ಚೇತನಗೊಳ್ಳಲಿ ಎಂದರು.

ವರದಿ- ಎಸ್.ವೆಂಕಟೇಶ್ ಎಕ್ಸ್ ಪ್ರೆಸ್ ಟಿವಿ

Click to comment

Trending

Exit mobile version