ಕರ್ನಾಟಕದ ಖಡಕ್ ಅಧಿಕಾರಿ ಇಂದು ಬಿಜೆಪಿಗೆ ಸೇರ್ಪಡೆ…!

ನವದೆಹಲಿ: ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಲಿದ್ದು, ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಕರ್ನಾಟಕ ಸಿಂಗಂ ಅಂತಾನೆ ಹೆಸರು ಪಡೆದಿದ್ದಾರೆ. ಉಡುಪಿ, ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ ಬೆಂಗಳೂರಿಗೆ ಡಿಸಿಪಿಯಾಗಿ ವರ್ಗಾವಣೆಯಾಗಿದ್ದರು. 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸ್ವಂತ ಊರು ತಮಿಳುನಾಡಿಗೆ ಹೋಗಿದ್ದರು. ಈಗ ಸ್ವಂತ ಊರಿನಲ್ಲೇ ಇದ್ದು, ಅಲ್ಲೇ ಕೆಲಸ ಮಾಡಿ 2021ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದರು. ಈ ಮೊದಲು ಅವರು ತಮಿಳುನಾಡಿನ ನಟ ರಜಿನಿಕಾಂತ್ ಅವರ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಪ್ರಕಾರ ಐಪಿಎಸ್ ಎಂದರೆ ದೇಶ, ರಾಷ್ಟ್ರೀಯ ಭದ್ರತೆ. ನಾನು ಅಧಿಕಾರಿಯಾಗಿದ್ದೆ. ಅದೇ ನಿಟ್ಟಿನಲ್ಲಿ ತಮಿಳುನಾಡಿಗೆ ಈಗ ಪರ್ಯಾಯ ಆಡಳಿತದ ಅಗತ್ಯವಿದೆ. ಆ ಮಾರ್ಗವನ್ನು ಬಿಜೆಪಿ ಒದಗಿಸಬಹುದೆಂದು ನಾನು ಭಾವಿಸುತ್ತೇನೆ. ಹೀಗಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು…

Please follow and like us:

Related posts

Leave a Comment