ಅಂತರ್ ರಾಜ್ಯ ಪ್ರಯಾಣಕ್ಕೆ ಸಿಕ್ತು ಗ್ರೀನ್ ಸಿಗ್ನಲ್..!

ಬೆಂಗಳೂರು : ಕೊರೊನಾ ವೈರಸ್ನಿಂದ ಬಂದ್ ಆಗಿದ್ದ ಅಂತರ್ರಾಜ್ಯ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇದೀಗ ಹೊಸ ಮಾರ್ಗಸೂಚಿಯನ್ನ ರಾಜ್ಯ ಸರ್ಕಾರ ಹೊರಡಿಸಿದೆ. ಬೇರೆ ರಾಜ್ಯಗಳಿಂದ ಬರುವ ಜನರಿಗೆ ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರೆಂಟೈನ್‌ಗೆ ಒಳಗಾಗಬೇಕಿತ್ತು. ಆದರೆ ಇದೀಗ ಆದೇಶವನ್ನ ಪರಿಷ್ಕರಿಸಿರುವ ರಾಜ್ಯ ಸರ್ಕಾರ 14 ದಿನಗಳ ಕಾಲ ಹೋಂ ಕ್ವಾರೆಂಟೈನ್ ರದ್ದು ಮಾಡಿದೆ. ಆದರೆ ಅಂತರ್ ರಾಜ್ಯ ಪ್ರವಾಸದ ವೇಳೆ ಕೋವಿಡ್ ಲಕ್ಷಣಗಳು ಕಂಡು ಬಂದರೆ ತಕ್ಷಣ ಸ್ವಯಂ ಪ್ರೇರಿತರಾಗಿ ಕೋವಿಡ್ ಟೆಸ್ಟ್ ಮಾಡಿಸಬೇಕಿದೆ. ಅಲ್ಲದೇ ಮತ್ತೊಬ್ಬರಿಗೆ ಸೋಂಕು ಹರಡದಂತೆ ಕ್ರಮ ತೆಗೆದುಕೊಳ್ಳಬೇಕಿದೆ. ಇನ್ನು ಮುಂದೆ ಸೇವಾ ಸಿಂದು ಪೋರ್ಟಲ್ ಸೇರಿದಂತೆ ವೈದ್ಯಕೀಯ ತಪಾಸಣೆ, ಹೋಂ ಕ್ವಾರೆಂಟೈನ್ ಅಥವಾ ಮನೆ ಬಾಗಿಲಿಗೆ ಪೋಸ್ಟರ್ ಅಂಟಿಸುವುದನ್ನ ರಾಜ್ಯ ಸರ್ಕಾರ ರದ್ದು ಮಾಡಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment