ರಾಜ್ಯ

5 ಅಂತಸ್ತಿನ ಕಟ್ಟಡ ಕುಸಿತ…100 ಕ್ಕೂ ಹೆಚ್ಚು ಮಂದಿ ಅವಶೇಷದ ಅಡಿ ಸಿಲುಕಿರುವ ಶಂಕೆ..!

Published

on

ರಾಯಗಢ : ಐದು ಅಂತಸ್ತಿನ ಕಟ್ಟಡ ಕುಸಿದು 47 ಕುಟುಂಬದ 100 ಕ್ಕೂ ಹೆಚ್ಚು ಜನರು ಅವಶೇಷದ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಟ್ಟಡ ಕುಸಿತ ಸ್ಥಳಕ್ಕೆ ಎನ್ಡಿಆರ್ಎಫ್ ಹಾಗು ಸ್ಥಳೀಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಅವಶೇಷದ ಅಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಂಜೆ 6.30 ವೇಳೆಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಸತತವಾಗಿ ಮಳೆ ಸುರಿದ ಪರಿಣಾಮ ಘಟನೆ ಸಂಭವಿಸಿದೆ ಎನ್ನಲಾಗಿದೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Click to comment

Trending

Exit mobile version