ಮಳವಳ್ಳಿ ತಾಲ್ಲೂಕನ್ನು ಬೆಂಬಿಡದೆ ಕಾಡುತ್ತಿರುವ ಕೊರೊನಾ..!

ಮಳವಳ್ಳಿ:ಇಂದು 62 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ನಡೆದಿದೆ. ನಿನ್ನೆಯೂ ಸಹ ಕರಲಕಟ್ಟೆ ಗ್ರಾಮದಲ್ಲಿ ಒಬ್ಬರು ಸಾವನ್ನಪ್ಪಿದ್ದು ಮಳವಳ್ಳಿ ತಾಲ್ಲೂಕಿನಲ್ಲಿ ಇದುವರೆಗೆ 5 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.ಮಳವಳ್ಳಿ ತಾಲ್ಲೂಕಿನಲ್ಲಿ ಪ್ರತಿದಿನ ಕೊರೊನಾ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ಇಂದು ತಾಲ್ಲೂಕಿನಲ್ಲಿ 21 ಮಂದಿಗೆ ಸೋಂಕು ದೃಡಪಟ್ಟಿದೆ.ಮಳವಳ್ಳಿ ತಾಲ್ಲೂಕಿನಲ್ಲಿ ಇದುವರೆಗೂ ಒಟ್ಟು 510 ಮಂದಿಗೆ ಸೋಂಕು ತಗುಲಿದ್ದು, ಇದರಲ್ಲಿ 223 ಮಂದಿ ಗುಣಮುಖರಾಗಿದ್ದು, 287 ಮಂದಿ ಸಕ್ರಿಯ ಪ್ರಕರಣ ಕೇಸುಗಳಿವೆ.ಇಂದು ತಾಲ್ಲೂಕು ಕಚೇರಿಯ ಸರ್ವೆಯರ್ ಸಿಬ್ಬಂದಿಗೆ ಕೋರೋನಾ ದೃಡವಾಗಿದ್ದು ಇದರ ಹಿನ್ನಲೆಯಲ್ಲಿ ಮಿನಿ ವಿಧಾನಸೌಧದ ಸಂಕೀರ್ಣ ಕಟ್ಟಡದ ಕಚೇರಿಗೆ ಔಷಧಿ ಸಿಂಪಡಣೆ ಮಾಡಲಾಗಿದೆ. ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದ್ದು, 2 ದಿನಗಳ ಕಾಲ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ತಾಲ್ಲೂಕಿನಲ್ಲಿ ಸಾವಿನ ಸಂಖ್ಯೆ ಹೆಚ್ಚು ಕಾಣಿಸಿಕೊಂಡಿರುವುದು ತಾಲ್ಲೂಕು ಆಡಳಿತಕ್ಕೆ ದೊಡ್ಡ ತಲೆನೋವಿನ ಸಂಗತಿಯಾಗಿದೆ.

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment