ರಾಜಕೀಯ

ಅತಿವೃಷ್ಟಿ ಹಾನಿಯಾ ಪರಿಹಾರಕ್ಕಾಗಿ ಮುಂದಿನ ವಾರ ದೆಹಲಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ..!

Published

on

ಬಾಗಲಕೋಟೆ: ಶೀಘ್ರದಲ್ಲಿ ಎಲ್ಲಾ ಶಾಸಕರನ್ನು ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು ಜೊತೆಗೆ ಎಲ್ಲಾ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು, ಮುಂದಿನ ವಾರ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು, ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಇದೆ. ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದರು.ಇದೇ ರೀತಿ ಇತರೆ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದೆ. ಮನೆ ಕಳೆದುಕೊಂಡಿರುವ ಬೆಳಗಾವಿಯ 44156 ಫಲಾನುಭವಿಗಳಿಗೆ 488 ಕೋಟಿ ಪರಿಹಾರ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Click to comment

Trending

Exit mobile version