ಮಹದೇಶ್ವರ ಸ್ವಾಮಿಯ ಭಕ್ತರ ಕೆಂಗಣ್ಣಿಗೆ ಗುರಿಯಾದ ರ್ಯಾಪರ್ ಚಂದನ್ ಶೆಟ್ಟಿ..!

ಬೆಂಗಳೂರು :ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.ಈ ಬಾರಿ ಜನಪದ ಹಾಡನ್ನು ಅಶ್ಲೀಲವಾಗಿ ತೋರಿರುವ ಆರೋಪ ಇದೀಗ ಕೇಳಿ ಬಂದಿದೆ.ಗಣೇಶ ಚತುರ್ಥಿಗೆ ‘ಕೋಲು ಮಂಡೆ ಜಂಗಮ ದೇವರು’ ಹೊಸ ರ್ಯಾಪರ್ ಸಾಂಗ್ ಚಂದನ್ ಶೆಟ್ಟಿ ರಿಲೀಸ್ ಮಾಡಿದ್ದರು.ಇದೀಗ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿದ್ದಾರೆ ಎಂಬ ಆರೋಪವಿದೆ.ಇನ್ನೂ ಈ ವಿಚಾರವಾಗಿ ಚಂದನ್ ಶೆಟ್ಟಿ ಜನರಲ್ಲಿ ಕ್ಷಮೆ ಕೇಳಿದ್ದು, ಹಾಡಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಯಾರ ಭಾವನೆಗಳಿಗೂ ಧಕ್ಕೆ ಬರುವ ರೀತಿ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗಳಿಗೆ ಜಾನಪದ ಹಾಡು ತಲುಪಲಿ ಎಂಬ ಕಾರಣಕ್ಕೆ ರ್ಯಾಪ್ ಹಾಡಿನ ರೂಪ ಕೊಟ್ಟಿದೆ.ಇದರಿಂದ ಯಾರಿಗಾದರು ಮನಸ್ಸಿಗೆ ಬೇಸರವಾಗಿದ್ದರೆ, ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.ವಿಡಿಯೋದಲ್ಲಿ ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲವಾಗಿ ಪ್ರದರ್ಶಿಸಲಾಗಿದೆ ಎನ್ನಲಾಗಿದೆ.ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment