ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೊರೊನಾ ಸೋಂಕು ಧೃಡ!

ಬೆಂಗಳೂರು: ರಾಜಕಾರಣಿಗಳನ್ನು ಬೆಂಬಿಡದೆ ಕಾಡುತ್ತಿದೆ.ಇತ್ತೀಚೆಗೆ ಸಿಎಂ ಬಿಎಸ್ ಯಡಿಯೂರಪ್ಪ ಹಾಗು ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಸೊಂಕು ಕಾಣಿಸಿಕೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಕೊರೊನಾ ಸೋಂಕು ಸಂಪೂರ್ಣ ಗುಣಮುಖರಾಗಿ ಇಬ್ಬರು ಡಿಸ್ಚಾರ್ಜ್ ಆಗಿದ್ದರು. ಇದೀಗ ಮತ್ತೊಬ್ಬ ರಾಜಕಾರಣಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಕೊರೊನಾ ಸೊಂಕು ಲಕ್ಷಣಗಳು ಕಂಡು ಬಂದ ಹಿನ್ನೆಲೆ, ಸ್ವಯಂ ಪ್ರೇರಿತರಾಗಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಸೊಂಕು ಇರುವುದು ಧೃಡವಾಗಿದೆ. ಈ ಬಗ್ಗೆ ಸ್ವತಃ ಡಿ.ಕೆ ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೇ ಸಂಪರ್ಕದಲ್ಲಿದ್ದವರು ಮುಂಜಾಗ್ರತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ವರದಿ-ಸುಪ್ರಿಯಾ ಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment